ಕಾಂಗ್ರೆಸ್‌ಗೆ ಬಾಯ್ ಬಾಯ್, ಜೆಡಿಎಸ್‌ಗೆ ಹಾಯ್ ಹಾಯ್ ಎಂದ ಮಾಜಿ ಸಂಸದ ಶಿವರಾಮೇಗೌಡ ಪುತ್ರ

ಕಾಂಗ್ರೆಸ್‌ಗೆ ಬಾಯ್ ಬಾಯ್, ಜೆಡಿಎಸ್‌ಗೆ ಹಾಯ್ ಹಾಯ್ ಎಂದ ಮಾಜಿ ಸಂಸದ ಶಿವರಾಮೇಗೌಡ ಪುತ್ರ

ಮಂಡ್ಯ: ಪದ್ಮನಾಭನಗರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಚೇತನ್ ಗೌಡ ಜೆಡಿಎಸ್​ಗೆ ಶೀಘ್ರದಲ್ಲೇ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರಂತೆ. ಚೇತನ್ ‌ಗೌಡ ಮಂಡ್ಯ ಮಾಜಿ ಸಂಸದ ಶಿವರಾಮೇಗೌಡ ಪುತ್ರ. ಜೆಡಿಎಸ್‌ನಿಂದ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸಲು ಚೇತನ್ ಸಿದ್ಧತೆ ಆರಂಭಿಸಿದ್ದಾರಂತೆ.

ಪದ್ಮನಾಭನಗರ MLA ಚುನಾವಣೆಯಲ್ಲಿ ಆರ್ ಅಶೋಕ್ ವಿರುದ್ಧ ಸೋತಿದ್ದ ಚೇತನ್ ರಾಜಕೀಯ ಭವಿಷ್ಯಕ್ಕಾಗಿ ಮತ್ತೆ ಜಿಲ್ಲಾ ಪಂಚಾಯತ್‌ನಿಂದ ಸ್ಪರ್ಧೆ ಮಾಡ್ತಿದ್ದಾರೆ ಎನ್ನಲಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲದ ಬಿಂಡಿಗನವಿಲೆ ಜಿ.ಪಂ ಕ್ಷೇತ್ರದಿಂದ ಸ್ಪರ್ಧೆಗೆ ತಯಾರಿ ನಡೆಸಿದ್ದು ಕಾರ್ಯಕರ್ತರು, ಅಭಿಮಾನಿಗಳ ಒತ್ತಾಯದಂತೆ ಚೇತನ್ ಸ್ಪರ್ಧೆ ಮಾಡ್ತಿದ್ದಾರೆ ಎನ್ನಲಾಗಿದೆ.

ಕೈ ನಾಯಕರನ್ನ ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಚೇತನ್ ರಾಜೀನಾಮೆ ನೀಡಿದ್ದಾರೆ. ಇನ್ನು ಈಗಾಗಲೇ JDS ಪಕ್ಷ ಸೇರ್ಪಡೆಗೆ ವರಿಷ್ಠರ ಸಮ್ಮತಿ ಸಿಕ್ಕಿದೆ ಎನ್ನಲಾಗಿದೆ. ಕೆಲ ದಿನಗಳಲ್ಲಿ ಮಂಡ್ಯ JDS ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರಂತೆ.

ಮಗನನ್ನ JDSಗೆ ಕರೆತರುವ ಮೂಲಕ MLA ಟಿಕೆಟ್‌ಗೆ ಶಿವರಾಮೇಗೌಡ ಮುಂದಾಗಿದ್ದಾರಂತೆ.. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸೆ ಇದೆ.. ನಾನು JDSನಿಂದ ಸ್ಪರ್ಧೆ ಮಾಡಿದ್ರೆ ಹಾಲಿ ಶಾಸಕ ಸುರೇಶ್‌ಗೌಡರನ್ನ ಮನೆಗೆ ಕಳುಹಿಸಲ್ಲ. ಆತನಿಗೆ ನನಗಿಂತ ಹೆಚ್ಚು ಭಾಷೆ ಗೊತ್ತಿದೆ. ಹಾಗಾಗಿ ಅವ್ರನ್ನ ಲೋಕಸಭೆಗೆ ಪ್ರಮೋಷನ್ ಮಾಡೋಣ. ನಾನು ಅಥವಾ MLC ಅಪ್ಪಾಜಿಗೌಡ ಅಭ್ಯರ್ಥಿಯಾಗ್ತೇವೆ ಎಂದು ನಾಗಮಂಗಲದಲ್ಲಿ ಮಾಜಿ ಸಂಸದ ಶಿವರಾಮೇಗೌಡ ಹೇಳಿಕೆ ನೀಡಿದ್ದಾರೆ.

ಅಲ್ಲದೇ ತಂದೆ ಮಗ ಬೇರೆ ಬೇರೆ ಪಕ್ಷ ಎಂಬ ಟೀಕೆಗಳಿದ್ದವು. ತಂದೆಯ ಮಾರ್ಗದರ್ಶನದಂತೆ ನಡೆಯಲು ಜೆಡಿಎಸ್ ಸೇರಿದ್ದೇನೆ. ವರಿಷ್ಠರ ಆಶೀರ್ವಾದ ಪಡೆದು ಜಿಲ್ಲಾ ಪಂಚಾಯತ್‌ಗೆ ಸ್ಪರ್ಧಿಸುತ್ತೇನೆ ಎಂದು ನಾಗಮಂಗಲದಲ್ಲಿ ಚೇತನ್ ಗೌಡ ಹೇಳಿಕೆ ನೀಡಿದ್ದಾರೆ.

Source: newsfirstlive.com Source link