ಮೂರು ದಿನಗಳ ಕಾಲ ಮಾದಪ್ಪ ದರ್ಶನಕ್ಕೆ ನಿರ್ಬಂಧ

ಚಾಮರಾಜನಗರ: ಶ್ರಾವಣದಲ್ಲಿ ಹೆಚ್ಚು ಭಕ್ತರ ಆಗಮನ ಹಿನ್ನೆಲೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಮೂರು ದಿನ ನಿರ್ಬಂಧ ವಿಧಿಸಲಾಗಿದೆ.

ಸೆಪ್ಟೆಂಬರ್ 5, 6 ಹಾಗೂ 7 ರಂದು ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹೆಚ್ಚು ಜನ ಆಗಮಿಸುವ ಹಿನ್ನೆಲೆ ಕೊರೋನಾ ಕಾರಣದಿಂದ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೂರು ದಿನಗಳ ಕಾಲ ಎಣ್ಣೆಮಜ್ಜನ, ಪೂಜೆ, ಕುಂಭಾಬಿಷೇಕ ನಡೆಯಲಿದೆ. ಹೀಗಾಗಿ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಜನಸಂದಣಿ ಉಂಟಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಫಿಟ್ ಆಗಿದ್ದ ಸಿದ್ಧಾರ್ಥ್ ಹೃದಯಾಘಾತಕ್ಕೆ ಕಾರಣವೇನು?

ಈಗಾಗಲೇ ಶ್ರಾವಣದ ಹಿನ್ನೆಲೆ ಹಿಮವದ್ ಗೋಪಾಲಸ್ವಾಮಿ ದರ್ಶನಕ್ಕೂ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಇದೀಗ ಮೂರು ದಿನಗಳ ಕಾಲ ಮಹದೇಶ್ವರನ ದರ್ಶನಕ್ಕೂ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಹಿನ್ನೆಲೆ ಗಡಿ ಜಿಲ್ಲೆಯಾದ್ದರಿಂದ ಡಿಸಿ ಕಟ್ಟುನಿಟ್ಟಿನ ಕ್ರಮ ವಹಿಸಿದ್ದಾರೆ.

Source: publictv.in Source link