ಬೆಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಸ್ಫೋಟ

ಬೆಂಗಳೂರು: ಸಿಲಿಕಾನ್ ಸಿಟಿಯ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಸ್ಫೋಟ ಸಂಭವಿಸಿದ್ದು, ದಾಸರಹಳ್ಳಿ ವಲಯದ ಚಿಕ್ಕಬಾಣಾವದಲ್ಲಿರುವ ಧನ್ವಂತರಿ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮೊದಲು ಒಬ್ಬ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ಆತನ ಪ್ರೈಮರಿ ಕಾಂಟ್ಯಾಕ್ಟ್ ಗಳನ್ನು ಟೆಸ್ಟ್ ಮಾಡಲಾಗಿತ್ತು. ಪ್ರಾಥಮಿಕ ಸಂಪರ್ಕಿತರಲ್ಲಿ ಒಟ್ಟು 11 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಳಿಕ ಧನ್ವಂತರಿ ನರ್ಸಿಂಗ್ ಕಾಲೇಜಿನ ಸುಮಾರು 42 ವಿದ್ಯಾರ್ಥಿಗಳನ್ನ ಟೆಸ್ಟ್ ಮಾಡಲಾಗಿದೆ. ಅದರಲ್ಲಿ ಮತ್ತೆ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಫಿಟ್ ಆಗಿದ್ದ ಸಿದ್ಧಾರ್ಥ್ ಹೃದಯಾಘಾತಕ್ಕೆ ಕಾರಣವೇನು?

ಕಾಲೇಜಿನ ಹಾಸ್ಟೆಲ್ ನಲ್ಲಿ ಮೈಕ್ರೋ ಕಂಟೈನ್ಮೆಂಟ್ ಜೋನ್ ಮಾಡಿರುವ ಬಿಬಿಎಂಪಿ, 12 ಮಂದಿಯನ್ನು ಮಂಜುನಾಥ ನಗರದ ಕೋವಿಡ್ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ. ಮತ್ತೆ 77 ಪ್ರಾಥಮಿಕ ಸಂಪರ್ಕಿತರು, 88 ದ್ವಿತೀಯ ಸಂಪರ್ಕಿತರನ್ನ ಗುರುತಿಸಲಾಗಿದೆ. ಸುಮಾರು 100 ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಕಾಲೇಜಿನಲ್ಲಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಒಬ್ಬ ವಿದ್ಯಾರ್ಥಿ ಕೇರಳದಿಂದ ಬಂದಿದ್ದ ಬಳಿಕ ಐದು ದಿನದಗಳ ಹಿಂದೆ ಕೇರಳದಿಂದ ಬಂದಿದ್ದ ವಿದ್ಯಾರ್ಥಿ. ಇದಾದ ನಂತರ ಕೇರಳದಿಂದ ಬಂದ. 11 ಜನರಿಗೂ ಪಾಸಿಟಿವ್ ಆಗಿದೆ. ಒಟ್ಟು ಕೇರಳದಿಂದ 12 ಜನ ಬಂದಿದ್ದು, 4 ಜನ ಪ್ರೈಮರಿ ಕಾಂಟ್ಯಾಕ್ಟ್ ನಲ್ಲಿದ್ದಾರೆ. ಧನ್ವಂತರಿ ಕಾಲೇಜಿನ ಹಾಸ್ಟೆಲ್‍ನಲ್ಲಿ ಒಟ್ಟು 66 ಜನ ಇದ್ದರು. ಇದರಲ್ಲಿ 16 ಜನ ವಿದ್ಯಾರ್ಥಿಗಳಿಗೆ ಪಾಸಿಟಿವ್ ಪತ್ತೆಯಾಗಿದೆ ಎನ್ನಲಾಗಿದೆ.

Source: publictv.in Source link