ತಲೈವಿ ರಿಲೀಸ್‍ಗೂ ಮುನ್ನ ಜಯಲಲಿತಾ ಸಮಾಧಿಗೆ ಕಂಗನಾ ಭೇಟಿ

ಚೆನ್ನೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಯದ ಬಹುನಿರೀಕ್ಷಿತ ತಲೈವಿ ಸಿನಿಮಾ ಬಿಡುಗಡೆಗೆ ಕೌಂಟ್‍ಡೌನ್ ಶುರುವಾಗಿದೆ. ಈ ನಡುವೆ ಕಂಗನಾ ರಣಾವತ್ ಜಯಲಲಿತಾ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ.

ಸದಾ ಒಂದಲ್ಲಾ ಒಂದು ವಿವಾದ ಮೂಲಕ ಭಾರೀ ಸದ್ದು ಮಾಡುವ ಕಂಗನಾ, ಯಾವಾಗಲೂ ವಿಭಿನ್ನವಾದ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ. ಸದ್ಯ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಜೀವನಾಧಾರಿತ ಸಿನಿಮಾದಲ್ಲಿ ಕಂಗನಾ ಕಾಣಿಸಿಕೊಂಡಿದ್ದು, ಈ ಸಿನಿಮಾ ಇದೇ ಸೆಪ್ಟೆಂಬರ್ 10ರಂದು ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ತೆರೆ ಮೇಲೆ ಬರಲಿದೆ.  ಇದನ್ನೂ ಓದಿ: ತಲೈವಿ ಜಯಲಲಿತಾ ಪಾತ್ರದಲ್ಲಿ ಬಾಲಿವುಡ್ ಕ್ವೀನ್

kangana

ಈ ಮಧ್ಯೆ ಕಂಗನಾ ರಣಾವತ್ ಇಂದು ಬೆಳಗ್ಗೆ ಚೆನ್ನೈನ ಮರೀನಾ ಬೀಚ್ ಬಳಿ ಇರುವ ಜಯಲಲಿತಾ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. ಸದ್ಯ ಸಿನಿಮಾ ಬಿಡುಗಡೆಗೂ ಮುನ್ನ ಜಯಲಲಿತಾ ಸಮಾಧಿಗೆ ಭೇಟಿ ನೀಡಿ ನಮಸ್ಕಾರಿಸಿರುವ ಕಂಗನಾಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:‘ತಲೈವಿ’ ಪಾತ್ರಕ್ಕೆ 6 ಕೆಜಿ ತೂಕ ಹೆಚ್ಚಿಸಿಕೊಂಡ ಕಂಗನಾ – ಮಾತ್ರೆ ತಿಂದ ಕಥೆ ಬಿಚ್ಚಿಟ್ಟ ನಟಿ

kangana
ಈಗಾಗಲೇ ತಲೈವಿ ಸಿನಿಮಾದ ಪೋಸ್ಟರ್, ಟೀಸರ್ ಹಾಗೂ ಹಾಡಿನ ಸಣ್ಣ ದೃಶ್ಯಗಳು ಬಿಡುಗಡೆಯಾಗಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ಎಂಜಿಆರ್ ಪಾತ್ರದಲ್ಲಿ ನಟ ಅರವಿಂದ್ ಸ್ವಾಮಿ ಅಭಿನಯಿಸಿದ್ದು, ಚಿತ್ರಕ್ಕೆ ಕೆ.ವಿ ವಿಜಯೇಂದ್ರ ಪ್ರಸಾದ್ ಚಿತ್ರಕಥೆ ರಚಿಸಿದ್ದಾರೆ. ಒಟ್ಟಾರೆ ಜಯಲಲಿತಾ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಂಗನಾ ಬಿಗ್ ಸ್ಕ್ರೀನ್ ಮೇಲೆ ಪ್ರೇಕ್ಷಕರನ್ನು ಹೇಗೆ ಮೋಡಿ ಮಾಡಲಿದ್ದಾರೆ ಕಾದು ನೋಡಬೇಕಾಗಿದೆ.

 

Source: publictv.in Source link