ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ ಘಟನೆ ನಡೆದಿದೆ.

ಇಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬವಿತ್ತು.. ಈ ಹಿನ್ನೆಲೆ ಅವರ ನಿವಾಸಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ದಂಪತಿಯನ್ನ ಕೂರಿಸಿ ಹೂಮಳೆಗರೆದಿದ್ದಾರೆ. ಬೈಲಹೊಂಗಲ ಡಿಎಸ್​ಪಿ, ಸಿಪಿಐ, ನೇಸರಗಿ ಪಿ.ಎಸ್.ಐ ಹಾಗೂ ಎ.ಎಸ್.ಐ ಭಾಗಿಯಾಗಿದ್ದಾರೆ. ಶಾಸಕ ಮಹಾಂತೇಶ ದೊಡ್ಡಗೌರ್ ಅವರ ಅಂಧಾ ದರ್ಭಾರ್​ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪೋಲಿಸ್ ಅಧಿಕಾರಿಗಳ ನಡೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Source: newsfirstlive.com Source link