ಭೀಕರ ಅಪಘಾತ: ಡಿಸೇಲ್ ಟ್ಯಾಂಕ್ ಸ್ಫೋಟಗೊಂಡು ಹೊತ್ತಿ ಉರಿದ ಲಾರಿಗಳು..!

ಭೀಕರ ಅಪಘಾತ: ಡಿಸೇಲ್ ಟ್ಯಾಂಕ್ ಸ್ಫೋಟಗೊಂಡು ಹೊತ್ತಿ ಉರಿದ ಲಾರಿಗಳು..!

ತುಮಕೂರು : ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಎರಡು ಸರಕು ಸಾಗಣೆ ಲಾರಿಗಳ ಮಧ್ಯ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಎರಡು ಲಾರಿಗಳು ಹೊತ್ತಿ ಉರಿದ ಘಟನೆ ವರದಿಯಾಗಿದೆ.

blank

ರಾಷ್ಟ್ರೀಯ ಹೆದ್ದಾರಿ 48 ರ ಊರುಕೆರೆ ಬಳಿ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಎರಡು ಲಾರಿಗಳು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿವೆ. ಚಾಲಕರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅಪಘಾತದಿಂದ ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

ಇದನ್ನೂ ಓದಿ: ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

Source: newsfirstlive.com Source link