ಅಭಿಷೇಕ್ ರಾಜಕೀಯ ಪ್ರವೇಶ ಬಗ್ಗೆ ಚುನಾವಣೆ ಬಂದಾಗ ನೋಡೋಣ: ಸುಮಲತಾ

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಕೆಲವು ಅಭಿವೃದ್ಧಿ ಕಾರ್ಯಗಳ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರನ್ನು ಭೇಟಿಯಾಗಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿಷೇಕ್ ಈಗ ಅವರಿಗೆ 28 ವರ್ಷ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಕಡೆ ಹೆಚ್ಚು ಗಮನಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೆ 20 ತಿಂಗಳು ಇದೆ. ಆಗ ನೋಡೋಣ ಏನಾಗಲಿದೆಯೋ ಅಭಿಮಾನಿಗಳಿಂದ ಒತ್ತಾಯ ಬಂದರೆ ನೋಡೋಣ. ಸದ್ಯಕ್ಕಂತೂ ಸಿನಿಮಾಗಳ ಕಡೆ ಗಮನಹರಿಸಿದ್ದಾರೆ ಎಂದಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರನ್ನು ಸಂಸದೆ ಸುಮಲತಾ ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆಯ ಬಳಿಕ ಗಣಿ ಸಚಿವರನ್ನು ಭೇಟಿ ಮಾಡಿದ್ದಾರೆ. ಸುಮಲತಾ ಅಕ್ರಮ ಗಣಿಗಾರಿಕೆ ಕುರಿತ ಮಾಹಿತಿಯನ್ನು ನೀಡಿದ್ದಾರೆ. ಇದನ್ನೂ ಓದಿ:  ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ

ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಸಚಿವರ ಜೊತೆ ಚರ್ಚಿಸಿದೆ. ಸಚಿವರನ್ನೂ ಜಿಲ್ಲೆಗೆ ಭೇಟಿ ನೀಡುವಂತೆ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರವಾಗಿ ಮೊದಲ ಹೆಜ್ಜೆ ಇಟ್ಟು ಆಗಿದೆ. ಕದ್ದು ಮುಚ್ಚಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆದು ನಿಯಂತ್ರಣಕ್ಕೆ ತರುವ ಸಮಯವಾಗಿದೆ. ಓಪನ್ ಆಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಗಿತವಾಗಿದೆ. ಊಹೆ ಮಾಡಿಕೊಂಡು ಇರುವವರಿಗೆ ನಾನು ಬಂದು ಉತ್ತರ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಅತ್ಯಾಚಾರನೂ ಇಲ್ಲ, ಏನೂ ಇಲ್ಲ ಅವರಿಬ್ಬರು ನಾಟಕವಾಡುತ್ತಿದ್ರು: ಎಸ್‍ಟಿಎಸ್

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವೇತನ ಕಡಿಮೆ ಇದೆ. ಅವರು ಕೊರೊನಾ ಸಮಯದಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಹೀಗಾಗಿ ನಾವು ಅವರಿಗೆ ಸಂಬಳ ಹೆಚ್ಚು ಮಾಡಬೇಕು ಎಂದು ನಾವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರಿಗೆ ಮನವಿ ಮಾಡಿದ್ದೇನೆ ಅವರು ಕೆಲವು ಸಲಹೆಯನ್ನು ಕೊಟ್ಟಿದ್ದಾರೆ. ಆರೋಗ್ಯ ಕಾರ್ಯಕರ್ತರ ಮೇಲೆ ನಡೆಯುತ್ತಿದ್ದ ಹಲ್ಲೆ ಕುರಿತಾಗಿ ನಾವು ಪಾರ್ಲಿಮೆಂಟ್‍ನಲ್ಲಿ ಚರ್ಚೆ ಮಾಡಿದ್ದೇವೆ. ಆರೋಗ್ಯ ಕಾರ್ಯಕರ್ತರು, ವೈದ್ಯರ ಮೇಲೆ ನಡೆಯುವ ಹಲ್ಲೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

Source: publictv.in Source link