ಮಂಡ್ಯದಲ್ಲಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಮಂಡ್ಯದಲ್ಲಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಗುಡ್ಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಆನಂದಕುಮಾರ್ (62), ಆರಾಧ್ಯ (10), ಗೌರವ್ (5) ಮೃತ ದುರ್ದೈವಿಗಳು.

ಮೋನಿಕಾ ಎಂಬುವವರ ಸ್ಥಿತಿ ಗಂಭೀರವಾಗಿದೆ. ಆನಂದಕುಮಾರ್, ಸ್ಕೂಟರ್​​ನಲ್ಲಿ ಸೊಸೆ ಮತ್ತು ಮೊಮ್ಮಕ್ಕಳನ್ನ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಗುಡ್ಡೇನಹಳ್ಳಿಯಿಂದ ಹೊಣಕೆರೆಗೆ ಬರುವ ವೇಳೆ ಅಪಘಾತ ಸಂಭವಿಸಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Source: newsfirstlive.com Source link