ಗಣೇಶೋತ್ಸವಕ್ಕೆ 5 ದಿನ ಅವಕಾಶ ಕೊಟ್ಟ ಸರ್ಕಾರ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ 5 ದಿನಗಳ ಷರತ್ತುಬದ್ಧ ಅನುಮತಿ ನೀಡಿದೆ. ಇಂದು ಸಂಜೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಘೋಷಣೆ ಆಗುವುವ ಸಾಧ್ಯತೆ ಇದೆ.

ಷರತ್ತಿನ ಅನುಮತಿ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗಣೇಶೋತ್ಸವ ಮೆರವಣಿಗೆ ಅವಕಾಶವಿಲ್ಲ. 30 ಜನರ ಮಿತಿ ನಿಗಧಿಪಡಿಸಿದ್ದು, ಅನುಮತಿ ಪಡೆದ ಸ್ಥಳಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ. ವಾರ್ಡ್‍ಗೆ ಒಂದು ಅಥವಾ ಗ್ರಾಮಕ್ಕೊಂದು ಗಣಪತಿ ಕೂರಿಸಲು ಅವಕಾಶ ನೀಡಿದೆ. ಇದನ್ನೂ ಓದಿ: ಗಣೇಶೋತ್ಸವಕ್ಕೆ ಅವಕಾಶ ಕೊಡಿ, ನಮ್ಮ ಬದುಕು ಬೀದಿಗೆ ಬಂದಿದೆ: ವ್ಯಾಪಾರಿಗಳ ಅಳಲು

ಸರ್ಕಾರ ನಿಗದಿತ ಸ್ಥಳದಲ್ಲಿ ಭಕ್ತರು ಸೇರಲು ಅವಕಾಶ ನೀಡಿದೆ. ಗಣೇಶೋತ್ಸವದಲ್ಲಿ ಮನರಂಜನಾ ಕಾರ್ಯಕ್ರಮಗಳಾದ ಆರ್ಕೆಸ್ಟ್ರಾ, ಡಿಜೆ ಅದ್ಧೂರಿ ಮೆರವಣಿಗೆ ಅವಕಾಶ ನಿರಾಕರಿಸಲಾಗಿದ್ದು, ನಿಗದಿತ ಸಂಖ್ಯೆಯಲ್ಲಿ ಭಕ್ತರು ಸೇರಲು ಅವಕಾಶ ಕಲ್ಪಿಸಿದೆ. ಕೆರೆಗಳಲ್ಲಿ ಗಣೇಶ ವಿರ್ಸಜನೆಗೆ ನಿರ್ಬಂಧ ಹೆರಲಾಗಿದ್ದು, ಬಿಬಿಎಂಪಿ ಸೂಚಿಸಿದ ಸ್ಥಳದಲ್ಲೇ ವಿರ್ಸಜನೆ ಅವಕಾಶ ನೀಡಲಾಗಿದೆ.

blank

ಗಣೇಶ ಪ್ರತಿಷ್ಠಾಪಿಸಿದ ಸ್ಥಳದಲ್ಲೆ ವಿಸರ್ಜನೆಗೆ ಅವಕಾಶ ಮಾಡಲಾಗಿದ್ದು, ಮೊಬೈಲ್ ಟ್ಯಾಂಕರ್‍ ನಲ್ಲಿ ವಿಸರ್ಜನೆಗೆ ಪ್ಲ್ಯಾನ್ ಮಾಡಲಾಗಿದೆ. ಇದರೊಂದಿಗೆ ಗಣೇಶೋತ್ಸವ ಮುಗಿಯುವವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಜೆಡಿಎಸ್ ಕಾರ್ಯಕರ್ತ, ಇಬ್ಬರು ಮಕ್ಕಳು ಸಾವು- ಹೆಚ್‍ಡಿಕೆ ಬೇಸರ

Source: publictv.in Source link