ಸೆ.30ಕ್ಕೆ ಪಶ್ಚಿಮ ಬಂಗಾಳ ಉಪಚುನಾವಣೆ; ಭಬನಿಪುರದಿಂದ ಮಮತಾ ಬ್ಯಾನರ್ಜಿ ಕಣಕ್ಕೆ

ಸೆ.30ಕ್ಕೆ ಪಶ್ಚಿಮ ಬಂಗಾಳ ಉಪಚುನಾವಣೆ; ಭಬನಿಪುರದಿಂದ ಮಮತಾ ಬ್ಯಾನರ್ಜಿ ಕಣಕ್ಕೆ

ನವದೆಹಲಿ: ಸಿಎಂ ಮಮತಾ ಬ್ಯಾನರ್ಜಿ ಭಬನಿಪುರದ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್​ ಘೋಷಿಸಿದೆ. ಕೇಂದ್ರ ಚುನಾವಣಾ ಆಯೋಗವೂ ಸೆಪ್ಟಂಬರ್ 30 ರಂದು ಪಶ್ಚಿಮ ಬಂಗಾಳದ ಉಪಚುನಾವಣೆ ಘೋಷಿಸಿದೆ. ಬಂಗಾಳದ ಸಂಸರ್‌ಗಂಜ್, ಜಂಗೀಪುರ ಮತ್ತು ಭಬನಿಪುರ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಇನ್ನು, ಕೇಂದ್ರ ಚುನಾವಣಾ ಆಯೋಗವೂ ಪಶ್ಚಿಮ ಬಂಗಾಳದಲ್ಲಿ ಉಂಟಾದ ರಾಜ್ಯದ ಸಾಂವಿಧಾನಿಕ ತುರ್ತುಸ್ಥಿತಿ ಕಾರಣ ಉಪಚುನಾವಣೆ ನಡೆಸಲು ಮುಂದಾಗಿದೆ. ಕೊರೋನಾ ಮೂರನೇ ಅಲೆ ಆಂತಕದ ನಡುವೆಯೂ ಎದುರಾಗುತ್ತಿರುವ ಈ ಉಪಚುನಾವಣೆಗೆ ಅಗತ್ಯ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಆಯೋಗ ತಿಳಿಸಿದೆ.

ಕಳೆದ ಏಪ್ರಿಲ್​​ ಮತ್ತು ಮೇ ತಿಂಗಳಿನಲ್ಲಿ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​​ 294 ಸ್ಥಾನಗಳ ಪೈಕಿ 213ರಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಆದರೆ ಮಮತಾ ಬ್ಯಾನರ್ಜಿ ಮಾತ್ರ ತನ್ನ ಕ್ಷೇತ್ರದಲ್ಲಿ ಸುವೆಂಧು ವಿರುದ್ಧ ಸೋತಿಸಿದ್ದರು.

ಇದನ್ನೂ ಓದಿ: ನನ್ನ ವಿರುದ್ಧದ ಆರೋಪ ಸಾಬೀತಾದ್ರೆ ಸಾರ್ವಜನಿಕವಾಗಿ ನೇಣಿಗೆ ಶರಣಾಗ್ತೇನೆ- ಮಮತಾ ಬ್ಯಾನರ್ಜಿ ಅಳಿಯ

ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ಮಾಡಲಾಗುವುದು ಎಂದು ಚುನಾವಣಾ ಆಯೋಗವು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

Source: newsfirstlive.com Source link