ಪತಿ, ಮಕ್ಕಳ ಮುಂದೆಯೇ 8 ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿಯ ಹತ್ಯೆಗೈದ್ರು!

ಕಾಬೂಲ್: ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದುಕೊಂಡ ಬಳಿಕ ಪ್ರತಿನಿತ್ಯ ಹಿಂಸಾತ್ಮಕ ಘಟನೆಗಳನ್ನು ನಡೆಸುತ್ತಲೇ ಇದ್ದಾರೆ. ಇದೀಗ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಆಕೆಯ ಪತಿ ಹಾಗೂ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಈ ಘಟನೆ ಅಫ್ಘಾನಿಸ್ತಾನದ ಘೋರ್ ಪ್ರಾಂತ್ಯದ ಕೇಂದ್ರ ನಗರದ ಫಿರೋಜ್ಕೋಹ್ ನಲ್ಲಿ ನಡೆದಿದೆ. ಮೃತ ಮಹಿಳಾ ಅಧಿಕಾರಿಯನ್ನು ಬಾನು ನೆಗರ್ ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, 8 ತಿಂಗಳ ಗರ್ಭಿಣಿಯಾಗಿದ್ದರು.

ಮಹಿಳಾ ಅಧಿಕಾರಿಯನ್ನು ತಾಲಿಬಾನಿಗಳು ಗುಂಡಿಟ್ಟು ಕೊಂದು ಬಳಿಕ ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ. ಸದ್ಯ ಸ್ಥಳೀಯ ತಾಲಿಬಾನ್ ಈ ಗಟನೆಯ ಕುರಿತು ತನಿಖೆ ನಡೆಸುವ ಭರವಸೆ ನೀಡಿದೆ ಎಂದು ಕುಟುಂಬ ಹೇಳಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೊಸ ಸರ್ಕಾರ ರಚನೆ- ಎರಡು ವಾರಗಳ ಬಳಿಕ ಆಡಳಿತ ಆರಂಭ?

blank

ಅಫ್ಘಾನಿಸ್ತಾನ ತಮ್ಮ ವಶವಾದ ಬಳಿಕ ತಾಲಿಬಾನಿಗಳು ಉದಾರವಾದಿಗಳೆಂದು ಬಿಂಬಿಸುಲು ಪ್ರಯತ್ನಿಸುತ್ತಿದ್ದಾರೆ. ಆದರೂ ಕಾಬೂಲ್ ನಲ್ಲಿ ಉಗ್ರರ ಗುಂಪು ತಮ್ಮ ವಿರೋಧಿಗಳನ್ನು ಸಿಕ್ಕ ಸಿಕ್ಕಲ್ಲಿ ಕೊಲೆ ಮಾಡುತ್ತಿರುವುದಲ್ಲದೇ, ಅಮಾಯಕರನ್ನು ಕೂಡ ಬಲಿ ತೆಗೆದುಕೊಳ್ಳುವ ಮೂಲಕ ರಾಕ್ಷಸ ಕ್ರೌರ್ಯ ಮೆರೆಯುತ್ತಿದ್ದಾರೆ.

Source: publictv.in Source link