ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಳಿಯನಿಗೆ ಇಂದು ED ಡ್ರೀಲ್

ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಳಿಯನಿಗೆ ಇಂದು ED ಡ್ರೀಲ್

ದೆಹಲಿ: ಕಲ್ಲಿದ್ದಲು ಹಗರಣ ಸಂಬಂಧ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ಎದುರು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಅಳಿಯ, ಸಂಸದ ಹಾಗೂ ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್​ ಬ್ಯಾನರ್ಜಿ ಅವರು ಹಾಜರಾಗಲಿದ್ದು, ವಿಚಾರಣೆ ಎದುರಿಸಲಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ದೆಹಲಿಯ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ಸೂಚನೆ ನೀಡಿದ್ದು, ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ ಅಭಿಷೇಕ್ ಬ್ಯಾನರ್ಜಿ ಹೆಸರು ಕೇಳಿ ಬಂದಿತ್ತು. ಈ ಸಂಬಂಧ 2019ರಲ್ಲಿ ಅಭಿಷೇಕ್ ಬ್ಯಾನರ್ಜಿ ಮತ್ತು ಅಭಿಷೇಕ್ ಪತ್ನಿ ರುಜಿರಾ ಬ್ಯಾನರ್ಜಿ ವಿರುದ್ಧ ದೂರು ದಾಖಲಾಗಿತ್ತು.

ಸೆ.01 ರಂದು ವಿಚಾರಣೆಗೆ ಬರುವಂತೆ ರುಜಿರಾ ಬ್ಯಾನರ್ಜಿಗೆ ಇ.ಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ರುಜಿನಾ ಅವರು ವಿಚಾರಣೆಗೆ ಹಾಜರಾಗಿಲ್ಲ. ಇನ್ನು ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋ ಆರೋಪಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಲು ಮುಂದಾಗಿದ್ದು, ನೋಟಿಸ್ ಜಾರಿ ಆಗಿರೋ ಹಿನ್ನೆಲೆಯಲ್ಲಿ ಅಭಿಷೇಕ್ ಬ್ಯಾನರ್ಜಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಲ್ಲಿದ್ದಲು ಗಣಿಗಾರಿಕೆ ಇಂದ ಕಲ್ಲಿದ್ದಲು ಪಡೆದು ಅಕ್ರಮವಾಗಿ ಮಾರಾಟ ಮಾಡಿರೋ ಆರೋಪ ದಂಪತಿಯ ಮೇಲಿದೆ.

Source: newsfirstlive.com Source link