ನಿರೀಕ್ಷೆ ತಕ್ಕಂತೆ ಚುನಾವಣಾ ಫಲಿತಾಂಶ ಬಂದಿಲ್ಲ, ತೀರ್ಪು ಒಪ್ಪಿಕೊಳ್ತೇವೆ -ಸಿದ್ದರಾಮಯ್ಯ

ನಿರೀಕ್ಷೆ ತಕ್ಕಂತೆ ಚುನಾವಣಾ ಫಲಿತಾಂಶ ಬಂದಿಲ್ಲ, ತೀರ್ಪು ಒಪ್ಪಿಕೊಳ್ತೇವೆ -ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿಯಲ್ಲಿ ಯಾರು ನಿರೀಕ್ಷೆ ಮಾಡದ ಫಲಿತಾಂಶ ಬಂದಿದೆ. ಮೂರು ನಗರ ಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗಳಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ. ಆದರೆ ಜನರ ಕೊಟ್ಟಿರೋ ತೀರ್ಪು ಒಪ್ಪಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಪರ ಜನರು ಮತದಾನ ಮಾಡಿದ್ದಾರೆ ಎಂದರೇ ನಾನು ಒಪ್ಪುವುದಿಲ್ಲ. ಮೂರು ಮಹಾನಗರ ಪಾಲಿಕೆ, ತರೀಕೆರೆ, ದೊಡ್ಡಬಳ್ಳಾಪುರ ಪುರಸಭೆ ಚುನಾವಣೆ ನಡೆದಿದೆ. ಮೈಸೂರು ಉಪಚುನಾವಣೆಯಲ್ಲಿ ಕಳೆದ ಬಾರಿ ಜೆಡಿಎಸ್ ಗೆದ್ದಿತ್ತು. ಈ ಬಾರಿ ನಾವು ಗೆದ್ದಿದ್ದೇವೆ. ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ..

blank

ಹುಬ್ಬಳ್ಳಿ- ಧಾರವಾಡದಲ್ಲಿ ಗೆಲ್ಲುತ್ತೇವೆ ಅಂದುಕೊಂಡಿದ್ದೆವು. ಅಲ್ಲಿ ಯಾರಿಗೂ ಬಹುಮತ ಬಂದಿಲ್ಲ. ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ, ರಾಜ್ಯ ಸಚಿವರು, ಸಿಎಂ ಎಲ್ಲರೂ ಇದ್ದಾರೆ. ಸರ್ಕಾರ ಅವರದ್ದೇ ಇದೆ, ಸಹಜವಾಗಿಯೇ ಸಂಪನ್ಮೂಲ ಹೆಚ್ಚಾಗಿ ಇರುತ್ತೆ. ಕಲಬುರಗಿಯಲ್ಲೂ ಯಾರಿಗೂ ಬಹುಮತ ಬಂದಿಲ್ಲ. ತರೀಕೆರೆಯಲ್ಲಿ 15 ಗೆದ್ದಿದ್ದೇವೆ. ಅಲ್ಲಿ ಬಿಜೆಪಿ ಒಂದು ಸ್ಥಾನ ಮಾತ್ರ ಗೆದ್ದಿದೆ.

ಆದರೆ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆದ್ದಿಲ್ಲ. ಆದರೂ ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚು ಸದಸ್ಯರು ಗೆದ್ದಿರೋದು ಖುಷಿ ನೀಡಿದೆ. ಬೆಳಗಾವಿಯಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪುನ್ನ ಒಪ್ಪಿಕೊಳ್ಳಬೇಕಾಗುತ್ತೆ ಎಂದರು.

Source: newsfirstlive.com Source link