ಐದು ರೂಪಾಯಿ ನಾಣ್ಯ ನುಂಗಿದ ಬಾಲಕಿ ಸಾವು

ಮೈಸೂರು: ಪುಟ್ಟ ಮಕ್ಕಳನ್ನು ಎಷ್ಟು ಜಾಗ್ರತೆಯಿಂದ ನೋಡಿಕೊಂಡರೂ ಸಾಲದು ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಬಾಲಕಿಯೊಬ್ಬಳು 5 ರೂ. ನಾಣ್ಯ ನುಂಗಿ ಮೃತಪಟ್ಟ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಖುಷಿ(4) ಎಂದು ಗುರುತಿಸಲಾಗಿದೆ. ಈ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಸೌಂದರ್ಯಕ್ಕಿಂತ ಆರೋಗ್ಯವೇ ಮುಖ್ಯ: ರಮ್ಯಾ 

ಖುಷಿ ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದಳು. ಎಂದಿನಂತೆ ಶುಕ್ರವಾರವೂ ಆಟವಾಡುತ್ತಿದ್ದಳು. ಈ ವೇಳೆ ತನ್ನ ಕೈಯಲ್ಲಿದ್ದ ನಾಣ್ಯವನ್ನು ಖುಷಿ ನುಂಗಿದ್ದಾಳೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ಖುಷಿಯನ್ನು ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಂತೆಯೇ ಖುಷಿ ಕೊನೆಯುಸಿರೆಳೆದಿದ್ದಾಳೆ.

Source: publictv.in Source link