ಮೈಸೂರಿನಲ್ಲಿ ಗ್ಯಾಂಗ್‍ರೇಪ್ ಪ್ರಕರಣ – 7ನೇ ಆರೋಪಿಯ ಬಂಧನ

ಮೈಸೂರು: ಇತ್ತೀಚೆಗೆ ಅರಮನೆ ನಗರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ 6 ಮಂದಿ ಕಾಮುಕರನ್ನು ಬಂಧಿಸಲಾಗಿದೆ. ಇದೀಗ ಈ ಆರೋಪಿಗಳ ಮಾಹಿತಿ ಮೇರೆಗೆ 7 ನೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್‍ನ 6ನೇ ಕಾಮುಕನ ಅರೆಸ್ಟ್ – ಆರೋಪಿಗಳ ಮಂಪರು ಪರೀಕ್ಷೆಗೆ ಚಿಂತನೆ

ಮೈಸೂರಿನ ಲಲಿತಾದ್ರಿಪುರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ನಟೋರಿಯಸ್‍ಗಳು ಮೈಸೂರಿನ ಜನನಿಬಿಡ ಸ್ಥಳಗಳಲ್ಲಿ ಹಿಂದೆಯೂ ರಾಬರಿ, ಸರಗಳ್ಳತನ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ನಡೆಸಿದ್ದು, ಹಣ, ಚಿನ್ನಾಭರಣಗಳನ್ನು ಕಳೆದುಕೊಂಡವರು ಮರ್ಯಾದೆಗೆ ಅಂಜಿ ದೂರು ನೀಡುತ್ತಿರಲಿಲ್ಲ. ಆರೋಪಿಗಳು ಅದನ್ನೆ ಪ್ಲಸ್ ಪಾಯಿಂಟ್ ಮಾಡಿಕೊಂಡು ಇಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದರು ಎಂಬ ಸಂಗತಿ ವಿಚಾರಣೆಯ ವೇಳೆ ತಿಳಿದುಬಂದಿತ್ತು. ಇದನ್ನೂ ಓದಿ: ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

ತಮಿಳುನಾಡಿನಿಂದ ಮೈಸೂರಿಗೆ ತರಕಾರಿ, ಬಾಳೆಕಾಯಿ ಗಾಡಿಗಳ ಜೊತೆ ಬರುತ್ತಿದ್ದ ಇವರು ಕೂಲಿ ಕೆಲಸಗಳನ್ನು ಮಾಡುತ್ತಿದ್ದರು. ಕೆಲಸ ಮುಗಿದ ನಂತರ ಮೈಸೂರಿನ ನಿರ್ಜನ ಪ್ರದೇಶಗಳು ಹಾಗೂ ಚಾಮುಂಡಿಬೆಟ್ಟದ ತಪ್ಪಲಿಗೆ ಸಂಜೆಯ ವೇಳೆ ಹೋಗುತ್ತಾರೆ. ಈ ಸಂದರ್ಭದಲ್ಲಿ ಒಂಟಿಯಾಗಿ ಬರುತ್ತಿದ್ದವರನ್ನು ಹೆದರಿಸಿ ಅವರ ಬಳಿ ಇರುತ್ತಿದ್ದ ಚಿನ್ನ, ಹಣ, ಮೊಬೈಲ್‍ಗಳನ್ನು ಕಸಿದುಕೊಂಡು ಕಳುಹಿಸುತ್ತಿದ್ದರು. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ – ಆರೋಪಿ ಮೇಲಿದೆ 10 ಕೇಸ್‍ಗಳು

blank

Source: publictv.in Source link