ರಾಜ್ಯಾದ್ಯಂತ ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ನಿರ್ಬಂಧ; ಹೈಕೋರ್ಟ್ ಆದೇಶ

ರಾಜ್ಯಾದ್ಯಂತ ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ನಿರ್ಬಂಧ; ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯಾದ್ಯಂತ ರಸ್ತೆಗಳಲ್ಲಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೇ ಮೈಸೂರಿನ ಗನ್ ಹೌಸ್ ಸರ್ಕಲ್‌ನಲ್ಲಿ ಪ್ರತಿಮೆ ಸ್ಥಾಪಿಸುವ ಪಾಲಿಕೆಯ ನಿರ್ಣಯವನ್ನು ರದ್ದುಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.

ಇತ್ತೀಚೆಗೆ ಮೈಸೂರಿನ ಗನ್ ಹೌಸ್ ಸರ್ಕಲ್‌ನಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಪ್ರತಿಮೆ ಸ್ಥಾಪನೆಗೆ ಮೈಸೂರು ಪಾಲಿಕೆ ಮುಂದಾಗಿತ್ತು. ಇದಕ್ಕೆ ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದ ಸರ್ಕಾರದಿಂದ ಅನುಮತಿಯೂ ಸಿಕ್ಕಿತ್ತು.

ಬಳಿಕ ಪ್ರತಿಮೆ ಸ್ಥಾಪನೆಯನ್ನು‌ ಪ್ರಶ್ನಿಸಿ ಕ್ಷತ್ರಿಯ ಮಹಾಸಭಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ ಕೇವಲ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಮಾತ್ರವಲ್ಲ ರಾಜ್ಯಾದ್ಯಂತ ರಸ್ತೆಗಳಲ್ಲಿ ಯಾವುದೇ ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಇಶಾ ಫೌಂಡೇಶನ್​ಗೆ ಬಿಗ್ ರಿಲೀಫ್.. ‘ಕಾವೇರಿ ಕೂಗು’ ಯೋಜನೆ ಪ್ರಶ್ನಿಸಿದ್ದ ಅರ್ಜಿ ವಜಾ

Source: newsfirstlive.com Source link