ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; 7ನೇ ಆರೋಪಿಯನ್ನ ಬಂಧಿಸಿದ ಪೊಲೀಸರು

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; 7ನೇ ಆರೋಪಿಯನ್ನ ಬಂಧಿಸಿದ ಪೊಲೀಸರು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಘಟನೆ ನಡೆದ 4 ದಿನಗಳ ಬಳಿಕ 5 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಬಂಧನ ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದರು. ಈಗ ತಮಿಳುನಾಡು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಆರು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ರು ಎಂದು ಸುದ್ದಿಗೋಷ್ಠಿಯಲ್ಲಿ ಡಿಜಿ/ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ 7 ಮಂದಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೈಸೂರು: ಅತ್ಯಾಚಾರ ಪ್ರಕರಣ ಭೇದಿಸಲು ಫೀಲ್ಡಿಗೆ ಇಳಿದಿದ್ದ 26 ಕ್ರೈಂ ಎಕ್ಸ್​​ಪರ್ಟ್​ಗಳು

Source: newsfirstlive.com Source link