ಕಾರ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಯಾದಗಿರಿ: ತಾಲೂಕಿನ ರಾಮಸಮುದ್ರ ಬಳಿ ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗುರುಮಠಕಲ್ ನಿವಾಸಿ ಮಹಾದೇವಪ್ಪ (35)ಸಾವನ್ನಪ್ಪಿದ ಮೃತ ದುರ್ದೈವಿ.

ಬೈಕ್ ಸವಾರ ಮಹಾದೇವಪ್ಪ ಯಾದಗಿರಿ ಯಿಂದ ಗುರುಮಠಕಲ್ ಕಡೆಗೆ ಹೊರಟಿದ್ದ ಎನ್ನಲಾಗಿದೆ. ಈ ವೇಳೆ ಎದುರಿನಿಂದ ಬಂದ ಕಾರ್ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂಬ ಮಾಹಿತಿ ಇದೆ. ಯಾದಗಿರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Source: newsfirstlive.com Source link