ಹಿಮಾಚಲ ಪ್ರದೇಶದಿಂದ ಬೆಂಗ್ಳೂರಿಗೆ ಬಂದು ಮಂಜನನ್ನು ಭೇಟಿಯಾದ ನಟಿ ನಿಧಿ

ಬೆಂಗಳೂರು: ಬಿಗ್‍ಬಾಸ್ ಸೀಸನ್-8ರ ಸ್ಪರ್ಧಿ ನಿಧಿ ಸುಬ್ಬಯ್ಯ ಹಿಮಾಚಲ ಪ್ರದೇಶಕ್ಕೆ ಹಾರಿದ್ದು, ಬೆಂಗಳೂರಿಗೆ ಬಂದು ಮಂಜು ಪಾವಗಾಡನನ್ನು ಭೇಟಿಯಾಗಿದ್ದಾರೆ.

ಬಿಗ್‍ಬಾಸ್ ನಂತರ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ನಿಧಿ ತಮ್ಮ ದಿನನಿತ್ಯದ ಅಪ್ಡೇಟ್ ಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇಂದು ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ, ನಾನು ಮತ್ತೆ ಬೆಂಗಳೂರಿಗೆ ಬಿಗ್‍ಬಾಸ್ ವಿನ್ನರ್ ಮಂಜು ಪಾವಗಡ ಜೊತೆ ಬಂದಿದ್ದು, ನಮ್ಮನ್ನು ಬಿಟ್ಟ ಶುಭಾಗೆ ಧನ್ಯವಾದ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಶುಭಾ ಇದಕ್ಕೆ ಪ್ರತಿಕ್ರಿಯಿಸಿದ್ದು, ಮುಂದಿನ ಬಾರಿ ಬಿಡುವುದು ಮಾತ್ರವಲ್ಲ, ಬೇಗ ಸಿಗೋಣ ನಾನು ಕಾಯುತ್ತಿದ್ದೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ:  ಫರಾ ಖಾನ್‍ಗೆ ಕೊರೊನಾ – ದೀಪಿಕಾ, ಅಮಿತಾಭ್ ಬಗ್ಗೆ ಅಭಿಮಾನಿಗಳ ಪ್ರಶ್ನೆ

 

View this post on Instagram

 

A post shared by Nidhi Subbaiah (@nidhisubbaiah)

ಬಿಗ್‍ಬಾಸ್ ನಂತರ ನಿಧಿ ಸುಮಾರು 22 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಪ್ರವಾಸ ಕೈಗೊಂಡಿದ್ದು, ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಅದನ್ನು ನೋಡಿದ ಅವರ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ: 22 ದಿನ ಹಿಮಾಚಲ ಪ್ರದೇಶದಲ್ಲಿ ನಿಧಿ ಸುಬ್ಬಯ್ಯ ಮಾಡಿದ್ದೇನು?

nidhi

ಮದುವೆಯ ನಂತರ ನಿಧಿ ಸಿನಿಮಾಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಬಿಗ್‍ಬಾಸ್ ನಂತರ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದು, ಯಾವ ರೀತಿಯ ಪಾತ್ರಗಳನ್ನು ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ.

Source: publictv.in Source link