ನೀರಿನ ರಭಸಕ್ಕೆ ಕೊಚ್ಚಿಹೋದ ಸೇತುವೆ- ಹಳ್ಳ ದಾಟಲು ಗ್ರಾಮಸ್ಥರ ಪರದಾಟ

ರಾಯಚೂರು: ಜಿಲ್ಲೆಯ ವಿವಿಧೆಡೆ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಾನ್ವಿ ತಾಲೂಕಿನ ತಡಕಲ್ ಗ್ರಾಮದ ಹಳ್ಳದ ಸೇತುವೆ ಮುಳುಗಡೆಯಾಗಿದೆ. ಮೊದಲೇ ಶಿಥಿಲವಾಗಿದ್ದ ಸೇತುವೆ ನೀರಿನ ರಭಸಕ್ಕೆ ಕೊಚ್ಚಿಹೋಗಿದೆ. ಇದರಿಂದ ಗ್ರಾಮದ ರಸ್ತೆ ಸಂಪರ್ಕ ಕಡಿತವಾಗಿದೆ.

ಭಾರೀ ಮಳೆಯಿಂದಾಗಿ ಹಳ್ಳ ತುಂಬಿ ಹರಿಯುತ್ತಿದ್ದು, ಗ್ರಾಮದಿಂದ ಹೊರಹೋಗಲು. ಕೃಷಿ ಕೆಲಸಕ್ಕೆ ತೆರಳಲು, ಶಾಲಾ ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಜೀವ ಕೈಯಲ್ಲಿಡಿದು ಕೆಲವರು ಸಾಹಸ ಮಾಡಿ ಸೇತುವೆ ಮೇಲೆ ಓಡಾಡುತ್ತಿದ್ದಾರೆ. ಇದನ್ನೂ ಓದಿ: ಅಭಿಮನ್ಯು ಟೀಂಗೆ ಹೊಸ ಮೆಂಬರ್ ಎಂಟ್ರಿ- ಅಶ್ವತ್ಥಾಮ ಭವಿಷ್ಯದ ಕ್ಯಾಪ್ಟನ್!

ರಭಸವಾಗಿ ಹರಿಯುವ ನೀರನ್ನು ಲೆಕ್ಕಿಸದೆ ಅಲ್ಲಲ್ಲಿ ಕೊಚ್ಚಿ ಹೋದ ಸೇತುವೆ ಮೇಲೆ ಓಡಾಡುತ್ತಿದ್ದಾರೆ. ಸೇತುವೆ ರಿಪೇರಿ ಮಾಡುವಂತೆ ತಡಕಲ್ ಗ್ರಾಮಸ್ಥರು ಸಾಕಷ್ಟು ಬಾರಿ ಒತ್ತಾಯ ಮಾಡಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಇದೀಗ ಸೇತುವೆ ಕೊಚ್ಚಿ ಹೋಗಿದೆ.

Source: publictv.in Source link