ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸಿ – ಗಡ್ಕರಿ ಬಳಿ ಸಿಎಂ ಮನವಿ

ನವದೆಹಲಿ: ಭಾರತಮಾಲಾ ಎರಡನೇ ಯೋಜನೆಯಲಿ ರಾಜ್ಯದ 5 ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಸಿಎಂ ಬೊಮ್ಮಾಯಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‍ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ

 

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಬಸ್ ಪೇಟೆಯಿಂದ ಹೊಸೂರಿನವರೆಗೆ ರಸ್ತೆ ನಿರ್ಮಾಣದ ಯೋಜನೆ ಆರಂಭಿಸಲು ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಯಲಿದೆ ಎಂದರು. ಇದನ್ನೂ ಓದಿ: ಮೇಯರ್ ಸ್ಥಾನ ಕೊಟ್ಟವರ ಜೊತೆ ಮೈತ್ರಿ – ಕಲಬುರಗಿ ಜೆಡಿಎಸ್ ಸದಸ್ಯರು

ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸುವಂತೆ ಮನವಿ ಮಾಡಲಾಗಿದೆ. ಬಿಜಾಪುರದಿಂದ ಸಂಕೇಶ್ವರ ರಸ್ತೆಯನ್ನು 80 ರಿಂದ 130 ಕಿಲೋಮೀಟರ್ ವರೆಗೆ ರಸ್ತೆ ವಿಸ್ತರಿಸುವಂತೆ ಕೇಳಿದ್ದೇವೆ. ಪ್ರವಾಹ ಪರಿಸ್ಥಿತಿ ವೇಳೆಯಲ್ಲಿ ಹಾಳಾದ ರಸ್ತೆ ಪರಿಹಾರವಾಗಿ 184 ಕೋಟಿ ಬಿಡುಗಡೆಗೆ ಕೇಂದ್ರ ಸಚಿವರು ಒಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಬಗ್ಗೆ ಅತಂಕವಿದ್ದು, ರಾಜ್ಯದಲ್ಲಿ ನಿಫಾ ವೈರಸ್ ಬಗ್ಗೆ ಗಮನ ಹರಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ: ಹೊರಟ್ಟಿ

ಬಾಹ್ಯಕಾಶ ಮತ್ತು ಪರಮಾಣು ಶಕ್ತಿ ಇಲಾಖೆಯ ರಾಜ್ಯ ಸಚಿವರನ್ನು ಬೇಟಿ ಮಾಡಿ ಆಡಳಿತ್ಮಾಕ ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

 

ಸಚಿವರಾದ ಜಿತೇಂದ್ರ ಸಿಂಗ್ ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಕೌಶಲ್ಯಭಿವೃದ್ಧಿ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಎಲೆಕ್ಟಾನಿಕ್ ವಸ್ತುಗಳ ಉತ್ಪಾದಕ ಘಟಕ ಸ್ಥಾಪನೆ ಮತ್ತು ರಾಜ್ಯದಲ್ಲಿ ಆಪ್ಟಿಕಲ್ ಫೈಬರ್ ಇಂಟರ್ ನೆಟ್ ಅಳವಡಿಸುವ ಬಗ್ಗೆ ಚರ್ಚೆ ಮಾಡಿ ರಾಜ್ಯ ಮಟ್ಟದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭಿಸುವ ಬಗ್ಗೆ ಮಾತುಕತೆಯಾಗಿದೆ ಎಂದರು.

ಡ್ರಗ್ಸ್ ಕೇಸ್‍ನಲ್ಲಿ ನಟಿ ಮಣಿಯ ಹೆಸರು ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಸವರಾಜ್ ಬೊಮ್ಮಾಯಿ, ಅದು ಪೊಲೀಸರ ಕೆಲಸ ಅವರು ಮಾಡುತ್ತಾರೆ ಎಂದರು.

Source: publictv.in Source link