ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಿಸಲು CM ಒಪ್ಪಿಗೆ

ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಿಸಲು CM ಒಪ್ಪಿಗೆ

ಬೆಂಗಳೂರು: ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಗ್ರೀನ್‌ಸಿಗ್ನಲ್ ನೀಡಿದ್ದಾರೆ.

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್‌ ಪಾಟೀಲ್ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. 11 ದಿನ ಗಣೇಶೋತ್ಸವ ಆಚರಿಸಲು ಸಿಎಂ ಅನುಮತಿ ನೀಡಿದ್ದಾರೆ. ಬೆಳಗಾವಿಯಲ್ಲಿ ಗಣೇಶೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿರನ್ನು ಭೇಟಿಯಾಗಿದ್ದೇನೆ. ಸಿಎಂ ಗಣೇಶೋತ್ಸವದ ವಿಚಾರಗಳನ್ನು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ.

ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಮಾಡುವುದು ಪ್ರತೀತಿಯಿದೆ. ಹೀಗಾಗಿ ಈ ಬಾರಿ ಅದಕ್ಕೆ ಅವಕಾಶ ಕೊಡಿ‌ ಎಂದು ಮನವಿ ಮಾಡಿದ್ದೇನೆ. ಸಿಎಂ ಮಧ್ಯಾಹ್ನದ ವೇಳೆಗೆ ಅಧಿಕೃತ ಆದೇಶವನ್ನು ಜಿಲ್ಲಾಡಳಿತದ ಕಡೆಯಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಅಂತಾ ಅಭಯ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇನ್ನು ಬೆಳಗಾವಿ ಹೊರತುಪಡಿಸಿ ರಾಜ್ಯಾದ್ಯಂತ ಐದು ದಿನ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರ ಹೇಳಿದೆ. ಆದರೆ ಬಿಬಿಎಂಪಿ ಕೇವಲ ಮೂರು ದಿನ ಮಾತ್ರ ಚೌಥಿ ಹಬ್ಬ ಆಚರಿಸಲು ಅನುಮತಿ ನೀಡಿದೆ.

Source: newsfirstlive.com Source link