ದೋಚಲು ಹಣವಿಲ್ಲದಾಗ ಹಲ್ಲೆಗೈದು ರೇಪ್ ಮಾಡಿದೆವು – ಸತ್ಯ ಬಿಚ್ಚಿಟ್ಟ 7ನೇ ಆರೋಪಿ

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯನ್ನು ಬಂಧಿಸಲಾಗಿದ್ದು, ಈತ ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟಿದ್ದಾನೆ.

ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 10 ದಿನ ತಮ್ಮ ವಶಕ್ಕೆ ಪಡೆದಿದ್ದಾರೆ. ಏಳನೇ ಆರೋಪಿಯಿಂದ ಮಹತ್ವದ ಮಾಹಿತಿ ಪೊಲೀಸರಿಗೆ ಲಭ್ಯವಾಗುತ್ತಿದೆ. ಎರಡು ದಿನದ ಹಿಂದೆ ತಮಿಳುನಾಡಿನ ತಿರುಪ್ಪೂರುನಲ್ಲಿ ಇವನನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್‍ನ 6ನೇ ಕಾಮುಕನ ಅರೆಸ್ಟ್ – ಆರೋಪಿಗಳ ಮಂಪರು ಪರೀಕ್ಷೆಗೆ ಚಿಂತನೆ

ಪ್ರಕರಣದಲ್ಲಿ ಬಂಧಿತನಾಗಿರೋ ಅಪ್ರಾಪ್ತನ ಜೊತೆ ಈ ಆರೋಪಿ ಕೂಲಿ ಕೆಲಸ ಮಾಡಿಕೊಂಡಿದ್ದ. ಪ್ರತಿ ಬಾರಿ ಮೈಸೂರಿಗೆ ಬಂದಾಗ ಸಂಜೆ ಎಣ್ಣೆ ಪಾರ್ಟಿ ಮಾಡುತ್ತಿದ್ದೆವು. ನಂತರ ನಿರ್ಜನ ಪ್ರದೇಶದಲ್ಲಿದ್ದವರನ್ನು ದೋಚುತ್ತಿದ್ದೆವು. ಈ ಘಟನೆಯಲ್ಲೂ ಯುವಕ ಯುವತಿ ಬಳಿ ಹಣ ದೋಚಲು ಹೋದೆವು. ಆದರೆ ಅವರ ಬಳಿ ಹಣ ಇರಲಿಲ್ಲ. ಆದ್ದರಿಂದ ಹಲ್ಲೆ ನಡೆಸಿ ನಂತರ ಅತ್ಯಾಚಾರವೆಸಗಿ ಪರಾರಿಯಾದೆವೂ ಎಂದು ವಿವರ ನೀಡಿದ್ದಾನೆ. ಇದನ್ನೂ ಓದಿ: ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

blank

ಸದ್ಯ 7ನೇ ಆರೋಪಿಯಿಂದ ಇನ್ನಷ್ಟು ವಿವರಗಳು ಪೊಲೀಸರಿಗೆ ಲಭ್ಯವಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ – ಆರೋಪಿ ಮೇಲಿದೆ 10 ಕೇಸ್‍ಗಳು

Source: publictv.in Source link