ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗ್ತಿದ್ದಾಗ ಭೀಕರ ದುರಂತ: ಓರ್ವ ಸಾವು, ಐವರು ಗಂಭೀರ

ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗ್ತಿದ್ದಾಗ ಭೀಕರ ದುರಂತ: ಓರ್ವ ಸಾವು, ಐವರು ಗಂಭೀರ

ಮಂಡ್ಯ: ಚಾಲಕನ‌ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಜವನಗಹಳ್ಳಿ ಬಳಿಯ ಕೊಳ್ಳೇಗಾಲ-ಮಳವಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.

blank

ಪಾಂಡವಪುರ ತಾಲೂಕಿನ ದೊಡ್ಡಬ್ಯಾರಹಳ್ಳಿಯ ಗೋವಿಂದರಾಜು (28) ಸ್ಥಳದಲ್ಲೇ‌ ಮೃತ ದುರ್ದೈವಿ. ಉಳಿದ ಐವರಿಗೂ ಗಂಭೀರ ಗಾಯವಾಗಿದ್ದು, ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ‌ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬೆಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Source: newsfirstlive.com Source link