ಸೋಂಕು ಸಂಖ್ಯೆ ಇಳಿಕೆ: ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ

ಸೋಂಕು ಸಂಖ್ಯೆ ಇಳಿಕೆ: ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ ಅಲ್ಲಿನ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿರಯವ ಹಿನ್ನೆಲೆ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಇನ್ನು ನೈಟ್ ಕರ್ಫ್ಯೂವನ್ನು ಮುಂದುವರಿಕೆ ಮಾಡಲಾಗಿದೆ.

ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಮುಂದುವರಿಕೆಯಾಗಲಿದ್ದು ಜನ ಕೋವಿಡ್ ನಿಯಮ ಪಾಲಿಸುವಂತೆ ಸೂಚನೆ ಮಾಡಲಾಗಿದೆ. ವ್ಯಾಪಾರಸ್ಥರು ಕನಿಷ್ಠ ಒಂದು ಡೋಸ್ ವ್ಯಾಕ್ಸಿನ್ ಪಡೆದಿರುವಂತೆ ಸೂಚನೆ ನೀಡಲಾಗಿದೆ.

Source: newsfirstlive.com Source link