70 ಕೋಟಿ ವೆಚ್ಚದಲ್ಲಿ IIHM ಸ್ಥಾಪನೆ: ಆನಂದ್ ಸಿಂಗ್

ಬಳ್ಳಾರಿ: ಸಂಡೂರು ಮತ್ತು ಹೊಸಪೇಟೆ ಮಧ್ಯಭಾಗದಲ್ಲಿ 70 ಕೋಟಿ ರೂ.ವೆಚ್ಚದಲ್ಲಿ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಡಿಎಂಎಫ್ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಐಐಎಚ್‍ಎಂ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ 17 ಕಡೆ ಐಎಚ್‍ಎಂಗಳಿವೆ, ಸಂಡೂರು ಇಲ್ಲವೇ ಹೊಸಪೇಟೆಯಲ್ಲಿ ಐಐಎಚ್‍ಎಂ ಸ್ಥಾಪನೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಅವನು ಎಷ್ಟೇ ದೊಡ್ಡವನಾದರೂ ಬಿಡಲ್ಲ: ಅನುಶ್ರೀ

ಬಳ್ಳಾರಿ ಕೋಟೆಗೆ ರೋಪ್ ವೇ ನಿರ್ಮಿಸುವಂತೆ ಮನವಿ ಬಂದಿದ್ದು, ಪರಿಶೀಲಿಸಿ ಕ್ರಮ ವಹಿಸಲಾಗುವುದು. ಡಿಎಂಎಫ್‍ಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ನನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ವೇಗ ನೀಡಲು ಸೂಚಿಸಲಾಗಿದೆ ಎಂದರು.

Source: publictv.in Source link