ಬೈಕ್​ಗಳ ಮುಖಾಮುಖಿ ಡಿಕ್ಕಿ: ಮೂವರು ಯುವಕರ ದುರ್ಮರಣ

ಬೈಕ್​ಗಳ ಮುಖಾಮುಖಿ ಡಿಕ್ಕಿ: ಮೂವರು ಯುವಕರ ದುರ್ಮರಣ

ಕಲಬುರಗಿ: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ತಾಂಡಾ ಬಳಿ ನಡೆದಿದೆ.

ಅಂಬರೀಶ್ (24), ಅನೀಲ್ ಗುತ್ತೇದಾರ್ (26), ನಾಗೇಶ್ (24) ಮೃತಪಟ್ಟವರು. ಮೃತರು ಬೇಲೂರು ಜೆ, ಮತ್ತು ಲಾಡಮುಗಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ. ದುರ್ಘಟನೆಯಲ್ಲಿ ಇನ್ನೋರ್ವ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

Source: newsfirstlive.com Source link