ದಾವಣಗೆರೆ: ಗಣೇಶ ಹಬ್ಬದ ನಿಮಿತ್ತ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಗಣೇಶ ಹಬ್ಬದ ನಿಮಿತ್ತ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದು, ದಿನಾಂಕ 10, 12, 14 ರಂದು ಮದ್ಯ ಮಾರಾಟ ಮಾಡದಂತೆ ನಿಷೇಧ ಹೇರಿದ್ದಾರೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಶಾಂತಿಯುತ ಗಣೇಶ ಚತುರ್ಥಿ ಆಚರಸಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Source: newsfirstlive.com Source link