ಹಾಸನದಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ – ಮಷಿನ್‍ ಸಂಪೂರ್ಣ ಜಖಂ

ಹಾಸನ: ಎಟಿಎಂ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಇದನ್ನೂ ಓದಿ: ಬಿಜೆಪಿಯ ಬೂಟಿನ ರುಚಿಗಾಗಿ ಹಪಹಪಿಸುವ ಪ್ರಶಾಂತ್ ಸಂಬರ್ಗಿ ಕನ್ನಡ ವಿರೋಧಿ: ಚಂದ್ರಚೂಡ್

ಅರಸೀಕೆರೆಯ ಎಪಿಎಂಸಿ ಬಳಿ ಇರುವ ಕೆನರಾ ಬ್ಯಾಂಕ್‍ಗೆ ಸೇರಿದ ಎಟಿಎಂನಲ್ಲಿ ದರೋಡೆಗೆ ಯತ್ನಿಸಲಾಗಿದ್ದು, ತಡರಾತ್ರಿ ಈ ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲೇ ಎಟಿಎಂ ಇದ್ದು, ಕಳ್ಳರು ಎಟಿಎಂ ಅನ್ನು ಬಹುತೇಕ ಜಖಂ ಗೊಳಿಸಿದ್ದಾರೆ. ಎಟಿಎಂ ಜಖಂ ಗೊಳಿಸಿದ್ದರು ಕೂಡ ಅಂತಿಮವಾಗಿ ಹಣ ಕದಿಯಲಾಗದೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ವೃತ್ತ ನಿರೀಕ್ಷಕ ಸೋಮೇಗೌಡ, ಡಿವೈಎಸ್‍ಪಿ ನಾಗೇಶ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಆಕ್ಸಿಸ್ ಬ್ಯಾಂಕ್‍ನ ಎಟಿಎಂನಲ್ಲಿ ದರೋಡೆ ಮಾಡಲು ದುಷ್ಕರ್ಮಿಗಳು ಪ್ರಯತ್ನಿಸಿದ್ದರು. ಈ ವೇಳೆ ಎಟಿಎಂ ಯಂತ್ರದಲ್ಲಿ ಹಣ ಬರುವ ಸ್ಥಳವನ್ನು ಕೊರೆಯಲು ದುಷ್ಕರ್ಮಿಗಳು ಮುಂದಾಗಿದ್ದರು. ಆದರೆ ಕೊರೆಯಲು ಸಾಧ್ಯವಾಗದ ಕಾರಣ ಮಷಿನ್‍ನನ್ನು ಒಡೆಯಲು ಯತ್ನಿಸಿದಾಗ ಎಟಿಎಂ ಕೊಠಡಿಯಲ್ಲಿ ಇದ್ದ ಸೈರನ್ ಕೂಗಿಕೊಂಡಿದೆ. ಇದರಿಂದ ಗಾಬರಿಗೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದರು. ಇದನ್ನೂ ಓದಿ: ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

Source: publictv.in Source link