ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ: ಕೊರೊನಾ ಮೂರನೇ ಅಲೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಾಡಿ ಮಾಡಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ನೀಡಿದ್ದಾರೆ.

ವಾರಂತ್ಯ ಕರ್ಫ್ಯೂ ಬಗ್ಗೆ ಸರ್ಕಾರದಿಂದ ನಿರ್ದೇಶನ ಬಂದಿದೆ. ಜಿಲ್ಲಾಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ತಜ್ಞರ ಸಮಿತಿ ಸಭೆ ಮಾಡಿದ್ದೇವೆ. ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಪ್ಯೂ ಹಿಂಪಡೆಯಲಾಗಿದೆ. ಉಳಿದಂತೆ ಎಲ್ಲಾ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯಿರಿ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

Source: newsfirstlive.com Source link