ಗಣೇಶ ಹಬ್ಬದಂದು ಪೂರ್ವಿಕರ ಸಮಾಧಿಗಳಿಗೆ ಪೂಜೆ ಸಲ್ಲಿಸಿದ ಡಿ.ಕೆ. ಶಿವಕುಮಾರ್ ಕುಟುಂಬ

ಗಣೇಶ ಹಬ್ಬದಂದು ಪೂರ್ವಿಕರ ಸಮಾಧಿಗಳಿಗೆ ಪೂಜೆ ಸಲ್ಲಿಸಿದ ಡಿ.ಕೆ. ಶಿವಕುಮಾರ್ ಕುಟುಂಬ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತವರೂರಾದ ರಾಮನಗರ ಜಿಲ್ಲೆ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ತಮ್ಮ ಪೂರ್ವಿಕರ ಸಮಾಧಿಗಳಿಗೆ ಕುಟುಂಬ ಸದಸ್ಯರ ಜತೆ ಶುಕ್ರವಾರ ಪೂಜೆ ಸಲ್ಲಿಸಿದರು.

ಪ್ರತಿವರ್ಷ ಗಣೇಶ ಹಬ್ಬದ ದಿನ ಮನೆತನದ ಹಿರಿಯರ ಸಮಾಧಿಗಳಿಗೆ ಪೂಜೆ ಸಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಹಿಂದಿನಿಂದಲೂ ನಡೆದು ಬಂದಿರುವ ಪದ್ಧತಿ. ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ, ಪತ್ನಿ ಉಷಾ, ಮಕ್ಕಳು ಹಾಗೂ ಕಾರ್ಯಕರ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Source: newsfirstlive.com Source link