ಸೆಪ್ಟೆಂಬರ್ 30ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ತೇವೆ- ಆರ್. ಅಶೋಕ್

ಸೆಪ್ಟೆಂಬರ್ 30ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ತೇವೆ- ಆರ್. ಅಶೋಕ್

ಬೆಂಗಳೂರು: ಈ ತಿಂಗಳ ಅಂತ್ಯದೊಳಗೆ ಅಂದ್ರೆ ಸೆಪ್ಟೆಂಬರ್ 30ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿಗಳನ್ನು ಸರಿಪಡಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

ಮಳೆಯಿಂದ ಹಾನಿಯಾದ ರಸ್ತೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಆರ್. ಅಶೋಕ್ ಸೂಚನೆ ನೀಡಿದ್ದು.. ಮಳೆಯಿಂದಾಗಿ ಗುಂಡಿ ಬಿದ್ದಿರುವ ರಸ್ತೆ ಸರಿಪಡಿಸುವಂತೆ ನಿರ್ದೇಶನ ನೀಡಿದ್ದಾರಂತೆ. ಪದ್ಮನಾಭನಗರದಲ್ಲಿನ ರಸ್ತೆ ಗುಂಡಿಗಳ ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಇದೇ ರೀತಿ ಬೆಂಗಳೂರಿನ ಎಲ್ಲಾ ರಸ್ತೆಗಳಲ್ಲಿನ ಹೊಂಡ ಗುಂಡಿಗಳನ್ನ ಸರಿಪಡಿಸಲಾಗುವುದು. ಈಗಾಗ್ಲೇ ನಗರದಲ್ಲಿನ ರಸ್ತೆ ಗುಂಡಿಗಳ ಬಗ್ಗೆ ಸರ್ವೇ ನಡೆಸಲಾಗಿದೆ. ಈ ತಿಂಗಳ 30ರೊಳಗೆ ಎಲ್ಲಾ ಗುಂಡಿಗಳನ್ನ ಮುಚ್ಚಿಸಲು ಅದೇಶಿಸಲಾಗಿದೆ. ಒಂದು ವೇಳೆ ಕಳಪೆ ಕಾಮಗಾರಿ ಕಂಡು ಬಂದಲ್ಲಿ ಅಂಥವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನ್ಯೂಸ್​​ಫಸ್ಟ್​​ಗೆ ಹೇಳಿಕೆ ನೀಡಿದ್ದಾರೆ.

Source: newsfirstlive.com Source link