ಪಾಸಿಟಿವಿಟಿ ರೇಟ್ ಶೇ.0.57ಕ್ಕೆ ಇಳಿಕೆ- ರಾಜ್ಯದಲ್ಲಿಂದು 967 ಹೊಸ ಕೊರೊನಾ ಕೇಸ್, 10 ಸಾವು

– ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 967 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 10 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಪಾಸಿಟಿವಿಟಿ ರೇಟ್ ಶೇ.0.57ಕ್ಕೆ ಇಳಿಕೆಯಾಗಿದೆ.

ಇಂದು 921 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 17,028 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 29,60,131 ಜನರಿಗೆ ಸೋಂಕು ತಗುಲಿದೆ. 29,05,604 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.57ಕ್ಕೆ ಇಳಿಕೆಯಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.03ರಷ್ಟಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

ಒಟ್ಟು 1,67,679 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,36,462 + 31,217 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 310 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 2 ಜನ ಮರಣ ಹೊಂದಿದ್ದಾರೆ. 207 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

blank

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ರಾಮನಗರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 1, ಬಳ್ಳಾರಿ 6, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 310, ಚಾಮರಾಜನಗರ 6, ಚಿಕ್ಕಮಗಳೂರು 37, ಚಿತ್ರದುರ್ಗ 10, ದಕ್ಷಿಣ ಕನ್ನಡ 141, ದಾವಣಗೆರೆ 3, ಧಾರವಾಡ 5, ಹಾಸನ 61, ಕಲಬುರಗಿ 7, ಕೊಡಗು 74, ಕೋಲಾರ 2, ಕೊಪ್ಪಳ 1, ಮಂಡ್ಯ 14, ಮೈಸೂರು 55, ರಾಯಚೂರು 1, ಶಿವಮೊಗ್ಗ 32, ತುಮಕೂರು 41, ಉಡುಪಿ 96, ಉತ್ತರ ಕನ್ನಡ 32 ಮತ್ತು ವಿಜಯಪುರದಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Source: publictv.in Source link