ರಾಜಕಾರಣಿಗಳ ಹುಟ್ಟುಹಬ್ಬಕ್ಕಿಲ್ವಾ ಕೊರೊನಾ ನಿಯಮ? ಎಂಎಲ್​​ಸಿ ಹುಟ್ಟುಹಬ್ಬಕ್ಕೆ ಸಂಗೀತ ಸಂಜೆ

ರಾಜಕಾರಣಿಗಳ ಹುಟ್ಟುಹಬ್ಬಕ್ಕಿಲ್ವಾ ಕೊರೊನಾ ನಿಯಮ? ಎಂಎಲ್​​ಸಿ ಹುಟ್ಟುಹಬ್ಬಕ್ಕೆ ಸಂಗೀತ ಸಂಜೆ

ಬಾಗಲಕೋಟೆ: ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬ ಹಿನ್ನೆಲೆ, ಕೋವಿಡ್ ನಿಯಮ ಗಾಳಿಗೆ ತೂರಿ ಹುಟ್ಟುಹಬ್ಬದಾಚರಣೆ ಮಾಡಲಾಗಿದೆ.

ಸಚಿವ ಮುರುಗೇಶ್ ನಿರಾಣಿ ಸಹೋದರ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬದ ಹಿನ್ನೆಲೆ, ಬೀಳಗಿಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನೂರಾರು ಜನ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಭಾಗಿಯಾಗಿದ್ದು ಕಂಡುಬಂತು.

ಇನ್ನು ಗಣೇಶ್ ಉತ್ಸವ ಆಚರಣೆಗೆ ಕಠಿಣ ರೂಲ್ಸ್ ಜಾರಿ ಮಾಡಿ ಸರ್ಕಾರ ಆದೇಶವನ್ನ ಹೊರಡಿಸಿದೆ. ಆದ್ರೆ ಇತ್ತ ರಾಜಕಾರಣಿಗಳ ಹುಟ್ಟು ಹಬ್ಬಕ್ಕೆ ಮಾತ್ರ ಈ ಯಾವ ಕೊರೊನಾ ನಿಯಮ ಅನ್ವಯವಾಗಲ್ವ ಅನ್ನೋ ಪ್ರಶ್ನೆ ಸದ್ಯ ಸಾರ್ವಜನಿಕರಲ್ಲಿ ಮೂಡಿದೆ.

blank

Source: newsfirstlive.com Source link