ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

ಮುಂಬೈ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ಮಹಿಳೆಯ ಮೇಲೆ ಕಾಮಾಂಧನೊಬ್ಬ ಅಟ್ಟಹಾಸ ಮೆರೆದು, ಅತ್ಯಾಚಾರ ಎಸಗಿರುವುದನ್ನು ಕಂಡು ಇಡೀ ದೇಶವೇ ಬೆಚ್ಚಿಬಿದ್ದಿದೆ.

ಮುಂಬೈನ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ 34 ವರ್ಷದ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಸದ್ಯ ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಿಂದ ವಾಪಸ್ಸಾಗ್ತಿದ್ದಾಗ ಕಾರು ಅಪಘಾತ- ಮದ್ವೆಯಾಗ್ಬೇಕಿದ್ದ ಜೋಡಿ ಸಾವು

ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಆರೋಪಿಯು ಮಹಿಳೆಗೆ ಥಳಿಸಿ, ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೈಕ್ ಆಕ್ಸಿಡೆಂಟ್ – ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

Source: publictv.in Source link