ಕೊರೋನಾ ನಿಯಂತ್ರಣಕ್ಕೆ ಉನ್ನತ ಮಟ್ಟದ ಸಭೆ; ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ಮಹತ್ವದ ನಿರ್ಧಾರವೇನು?

ಕೊರೋನಾ ನಿಯಂತ್ರಣಕ್ಕೆ ಉನ್ನತ ಮಟ್ಟದ ಸಭೆ; ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ಮಹತ್ವದ ನಿರ್ಧಾರವೇನು?

ನವದೆಹಲಿ: ಕೇರಳ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಾರಕ ಕೊರೋನಾ ಕೇಸುಗಳು ಹೆಚ್ಚಾಗುತ್ತಲೇ ಇವೆ. ಇದರ ಪರಿಣಾಮ ಮೂರನೇ ಅಲೆ ಭೀತಿ ಶುರುವಾಗಿದೆ. ಹೀಗಿರುವಾಗಲೇ ದೇಶದ ಕೊರೋನಾ ಸ್ಥಿತಿಗತಿ ಮತ್ತು ಲಸಿಕೆ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೊರೋನಾ ಸೋಂಕು ಹತೋಟಿಗೆ ತರಲು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ದೇಶಾದ್ಯಂತ ಶೇ. 10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹೈ ಅಲರ್ಟ್​ ಎಂದು ಪರಿಗಣಿಸಲು ನಿರ್ಧರಿಸಲಾಗಿದೆ.

ಹೈ ಅಲರ್ಟ್​ ಎಂದು ಘೋಷಿಸಬಹುದಾದ 35ಕ್ಕೂ ಹೆಚ್ಚು ಜಿಲ್ಲೆಗಳು ದೇಶದಲ್ಲಿವೆ. ಭಾರತದ ಅರ್ಧದಷ್ಟು ವಯಸ್ಕರು ಮೊದಲ ಡೋಸ್​​ ಲಸಿಕೆ ಪಡೆದಿದ್ದಾರೆ. ಇನ್ನೂ ಎರಡನೇ ಡೋಸ್​​ ಶೇ. 18ರಷ್ಟು ಜನ ತೆಗೆದುಕೊಂಡಿದ್ದಾರೆ. ಲಸಿಕೆ ನೀಡುವ ಸಂಖ್ಯೆ ಹೆಚ್ಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ನಂಜನಗೂಡು ಕಾಂಗ್ರೆಸ್​​ ಟಿಕೆಟ್​​ ಫೈಟ್​​​; ಎಚ್​​.ಸಿ ಮಹದೇವಪ್ಪ, ಕಳಲೆ ಕೇಶವಮೂರ್ತಿ ನಡುವೆ ಭಾರೀ ಪೈಪೋಟಿ

Source: newsfirstlive.com Source link