ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರು

ಹಾಸನ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪೊಂದು ಪೊಲೀಸರನ್ನೇ ತಳ್ಳಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

ಕೊರೊನಾ ನಿಯಮ ಪಾಲಿಸಿ ಗಣೇಶನ ಮೆರವಣಿಗೆ ಮಾಡಲು ಯುವಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಗಣಪತಿ ವಿಸರ್ಜನೆ ವೇಳೆಯಲ್ಲಿ ಡೋಲು ಬಡಿಯುತ್ತಾ, ಕುಣಿಯುತ್ತಿದ್ದವರನ್ನು ಸಬ್ ಇನ್ಸ್ ಪೆಕ್ಟರ್ ತಡೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಯುವಕರು ಡೋಲು ಬಡಿಯುವುದನ್ನು ನಿಲ್ಲಿಸದಂತೆ ಕುಮ್ಮಕ್ಕು ನೀಡಿದ್ದಾರೆ. ಒಂದು ಕಡೆ ಪಿಎಸ್‍ಐ ಡೋಲು ಬಡಿಯುತ್ತಾ ಕುಣಿಯುವುದನ್ನು ನಿಲ್ಲಿಸಿ ಎಂದು ಮನವಿ ಮಾಡುತ್ತಿದ್ದರೆ, ಮತ್ತೊಂದೆಡೆ ಡೋಲು ಬಡಿಯುವುದನ್ನು ನಿಲ್ಲಿಸದಂತೆ ಯುವಕರು ಆಗ್ರಹ ಮಾಡಿದ್ದಾರೆ. ಇದನ್ನೂ ಓದಿ: ಕಿಡಿಗೇಡಿಗಳಿಂದ ಗಣಪತಿ ಮೂರ್ತಿ ಧ್ವಂಸ – ಗ್ರಾಮಸ್ಥರಲ್ಲಿ ಆತಂಕ

ಈ ವೇಳೆಯಲ್ಲಿ ಪಿಎಸ್‍ಐ ಹಾಗೂ ಯುವಕರ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು, ಯುವಕರು ಪೊಲೀಸರನ್ನೇ ತಳ್ಳಾಡಿದ್ದಾರೆ. ಪೊಲೀಸರ ಅಸಹಾಯಕತೆ ಸ್ಥಳೀಯರೊಬ್ಬರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಈ ವಿಚಾರವಾಗಿ ಈವರೆಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಬೈಕ್ ಆಕ್ಸಿಡೆಂಟ್ – ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

Source: publictv.in Source link