ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್‍ಗೆ ಮೇಯರ್ ಗಿರಿ..?

– ಬಿಜೆಪಿಗೆ ಅಧಿಕಾರ ತಪ್ಪಿಸಲು ‘ಕೈ’ ಚಿಂತನೆ

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯ ಗದ್ದುಗೆ ವಿಚಾರದಲ್ಲಿನ ಗೊಂದಲ ಮುಂದುವರಿದಿದ್ದು, ಇದೀಗ ಜೆಡಿಎಸ್‍ಗೆ ಮೇಯರ್ ಗಿರಿ ದೊರಕುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಕಾಂಗ್ರೆಸ್ ಬಿಟ್ಟುಕೊಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ಬಿಜೆಪಿಗೆ ಅಧಿಕಾರ ತಪ್ಪಿಸಲು ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ಜೆಡಿಎಸ್ ಹಠ ಹಿಡಿದ್ರೆ ಕಾಂಗ್ರೆಸ್, ಮೇಯರ್ ಸ್ಥಾನ ಬಿಟ್ಟುಕೊಡುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿದೆ. ಹೀಗಂತ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ ಖರ್ಗೆ ಕಲಬುರಗಿ ಕಾಂಗ್ರೆಸ್ ಕಾರ್ಪೋರೇಟರ್ ಗಳ ಮನವೊಲಿಸುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಹೆಚ್‍ಡಿಕೆಗೆ ಕಲಬುರಗಿ ಮೈತ್ರಿ ಪವರ್ – ಮೇಯರ್ ಪಟ್ಟದ ಬೇಡಿಕೆ ಅಸ್ತ್ರ ಏಕೆ?

ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ಸಿದ್ಧರಾಗಿ ಅಂತ ಕಾಂಗ್ರೆಸ್ ನಿಂದ ಈಗಾಗಲೇ ಸಂದೇಶ ರವಾನೆಯಾಗಿದೆ. ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಜೆಡಿಎಸ್ ಜೊತೆಗೆ ಶೀಘ್ರವೇ ರಾಜೀ ಸಂಧಾನ ಅಥವಾ ಮೈತ್ರಿ ಆಗಲಿ ಎಂದು ಕಾಂಗ್ರೆಸ್ ನಾಯಕರ ಮುಂದೆ ಕಾರ್ಪೋರೇಟರ್ ಗಳು ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಮದು ಕಲಬುರಗಿಯ ಆರು ಮಂದಿ ಕಾರ್ಪೋರೇಟರ್ ಗಳು ಡಿಕೆಶಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

blank

ಇತ್ತ ಮೇಯರ್ ಸ್ಥಾನ ಬಿಟ್ಟುಕೊಡಲು ನಾವು ತಯಾರಿದ್ದೇವೆ. ನಮ್ಮ ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧ. ಬೇಕಾದ್ರೆ ಮೇಯರ್ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಡುತ್ತೇವೆ ಎಂದು ಪಬ್ಲಿಕ್ ಟಿವಿಗೆ ಕಾಂಗ್ರೆಸ್ ಕಾರ್ಪೋರೇಟರ್ ಗಳು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: JDS ಜೊತೆ ಹೊಂದಾಣಿಕೆ ಸಾಹಸಕ್ಕೆ ಕೈಹಾಕಿ, ನಿಮ್ಮ ಕುರ್ಚಿಗೆ ಕುತ್ತು ತಂದ್ಕೋಬೇಡಿ- ಸಿಎಂಗೆ ರೇವಣ್ಣ ಸಲಹೆ

Source: publictv.in Source link