ನಟ ಸಾಯಿಧರ್ಮ ತೇಜ್ ಆರೋಗ್ಯ ಸ್ಥಿರ

ಹೈದರಾಬಾದ್: ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿದ್ದ ಟಾಲಿವುಡ್ ನಟ ಸಾಯಿಧರ್ಮ ತೇಜ್ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಸಾಯಿಧರ್ಮ ತೇಜ್ ಹೈದರಾಬಾದ್‍ನ ಮಾದಾಪುರ್ ಕೇಬಲ್ ಬ್ರಿಡ್ಜ್ ಬಳಿ ಸ್ಪೋಟ್ರ್ಸ್ ಬೈಕಿನಲ್ಲಿ ಬರುವಾಗ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಪಿಡ್ಸ್ ಬಂದು ಕೋಮಾ ಸ್ಥಿತಿಗೆ ತಲುಪಿದ್ದರು. ಇದೀಗ ವಂಟಿಲೇಟರ್‍ನಲ್ಲಿರುವ ಸಾಯಿಧರ್ಮ ತೇಜ್ ಅವರ ಆರೋಗ್ಯ ಸ್ಥಿರವಾಗಿದೆ. ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. 24 ಗಂಟೆಗಳ ಕಾಲ ಆರೋಗ್ಯದ ಮೇಲೆ ನಿಗಾವಹಿಸಬೇಕಾಗಿದೆ. ಎಲ್ಲಾ ಅಂಗಾಂಗಗಳು ಕಾರ್ಯನಿರ್ವಹಿಸುತ್ತಿವೆ. ಐಸಿಯುನಲ್ಲಿ ಹೆಚ್ಚಿನ ಚಿಕಿತ್ಸೆ ಮುಂದುವರಿಯುವುದಾಗಿ ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಘಟನೆಯಿಂದ ಸಾಯಿಧರ್ಮ ತೇಜ್ ಬಲಗಣ್ಣು ಹಾಗೂ ಎದೆ ಭಾಗ, ಭುಜ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿತ್ತು. ಸದ್ಯ ಹೈದರಾಬಾದ್‍ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಚಿರಂಜೀವಿ, ಪವನ್ ಕಲ್ಯಾಣ್, ಅಲ್ಲು ಅರ್ಜುನ್, ಅಲ್ಲು ಅರವಿಂದ್ ಸೇರಿದಂತೆ ಇಡೀ ಕುಟುಂಬವೇ ಆಸ್ಪತ್ರೆಯಲ್ಲಿದೆ. ಇದನ್ನೂ ಓದಿ: ಬೈಕ್ ಆಕ್ಸಿಡೆಂಟ್ – ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

ಈ ಬಗ್ಗೆ ಟ್ವೀಟ್ ಮಾಡಿರುವ ನಟ ಚಿರಂಜೀವಿ, ವೈದ್ಯರು ತಿಳಿಸಿರುವಂತೆ ಆತಂಕ ಪಡುವ ಅಗತ್ಯವಿಲ್ಲ. ಚಿಕಿತ್ಸೆ ಮುಂದುವರಿದಿದೆ. ಮುಂದಿನ ಕೆಲ ದಿನಗಳಲ್ಲಿ ಆತ ಸಹಜ ಸ್ಥಿತಿಗೆ ಮರಳುತ್ತಾನೆ ಎಂದು ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ

Source: publictv.in Source link