ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಸಿಎಂ

ಬೆಂಗಳೂರು: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರದ, ಅರಣ್ಯ ಭವನದ ಆವರಣದಲ್ಲಿರುವ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಹುತಾತ್ಮರಿಗೆ ಗೌರವ ಸಮರ್ಪಿಸಿದರು.

ಬಳಿಕ ಮಾತನಾಡಿದ ಸಿಎಂ, ರಾಜ್ಯದಲ್ಲಿ ಅರಣ್ಯ ಸಂರಕ್ಷಣೆಗೆ ಒತ್ತು ಕೊಡಬೇಕು. ನಾವು ಕಾಡು ನಾಶ ಮಾಡಿದರೆ ಆ ಪ್ರಾಣಿಗಳು ನಮ್ಮ ಬಳಿ ಬರುತ್ತದೆ. ಇಲಾಖೆಯ ಹುತಾತ್ಮರ ಜೊತೆ ಪ್ರಾಣಿಗಳ ದಾಳಿಯಿಂದ ಮರಣ ಹೊಂದಿದ ನಾಗರಿಕರು ಕೂಡ ಹುತಾತ್ಮರು. ಅರಣ್ಯ ಇಲಾಖೆಯ ಕಾರ್ಯಚಟುವಟಿಕೆ ಇನ್ನಷ್ಟು ಮುಂದುವರಿಯಲಿ. ದಕ್ಷತೆಯಿಂದ ಕಾಡನ್ನು ಉಳಿಸುವಂತಹ ಕಾರ್ಯ ಅರಣ್ಯ ಇಲಾಖೆಯಿಂದ ಆಗಲಿ ಎಂದು ಶುಭ ಹಾರೈಸಿದರು.  ಇದನ್ನೂ ಓದಿ: ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ

ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ

Source: publictv.in Source link