ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ

ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ

ಕಲಬುರಗಿ: ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಆಗೋದು ಪಕ್ಕಾ ಎಂದಿದ್ದಾರೆ.

ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದ, ಬಿಜೆಪಿ ಇದೀಗ ‌ಪಾಲಿಕೆ ಮೈತ್ರಿಗಾಗಿ ಮತ್ತೆ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದೆ. ನಾಚಿಕೆಯಾಗಬೇಕು ಇವರಿಗೆ, ಮಾನ‌ ಮರ್ಯಾದೆ ಇದೆಯಾ ಬಿಜೆಪಿಯವರಿಗೆ ..? ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ. ಶಾಸಕರನ್ನ ಖರೀದಿ ಮಾಡಿ ವಾಮ‌ ಮಾರ್ಗದ ಮೂಲಕ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರನ್ನ ಬಿಜೆಪಿ ಖರೀದಿ ಮಾಡಲು ಸಾಧ್ಯವೇ ಇಲ್ಲ. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರುವುದು ಖಚಿತ ಎಂದಿದ್ದಾರೆ.

Source: newsfirstlive.com Source link