ಕೊಡಗಿನಲ್ಲಿ ವ್ಯಾಕ್ಸಿನ್ ಪಡೆದ 953 ಮಂದಿಗೆ ಮತ್ತೆ ಕೊರೊನಾ

ಮಡಿಕೇರಿ: ಕೊರೊನಾ ವ್ಯಾಕ್ಸಿನ್ ಪಡೆದಿದ್ದರೂ ಕೂಡ ಕೊಡಗಿನಲ್ಲಿ 953 ಮಂದಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ.

ಮೊದಲ ಡೋಸ್ ವ್ಯಾಕ್ಸಿನ್ ಪಡೆದು ಹೇಗೆ ಬೇಕೋ, ಹಾಗೇ ಓಡಾಕೊಂಡಿದ್ದ ಕೊಡಗಿನ 953 ಜನರಿಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದೆ. ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದವರನ್ನು ಪರೀಕ್ಷಿಸಿದಾಗ ಅವರಿಗೆಲ್ಲಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಸೋಂಕಿತರಿಗೆ ಆಸ್ಪತ್ರೆ ಮತ್ತು ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರೂ ಗುಣಮುಖರಾಗಿದ್ದಾರೆ. ಅಲ್ಲದೇ ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಇಲ್ಲಿಯವರೆಗೂ ಸೋಂಕು ದೃಢಪಟ್ಟ ಪ್ರಕರಣಗಳಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿದ್ದಾರೆ. ಇದನ್ನೂ ಓದಿ: ಕಲಬುರಗಿ ಪಾಲಿಕೆ ಗದ್ದುಗೆ ಹಿಡಿಯಲು ಏನು ತಂತ್ರಗಾರಿಕೆ ಮಾಡ್ಬೇಕೋ ಮಾಡ್ತೇವೆ: ಜೋಶಿ

Madikeri DC

ಈಗಾಗಲೇ ಕೊರೊನಾ ಮಹಾಮಾರಿ ಮೂರನೇ ಅಲೆ ಹರಡುವ ಆತಂಕದಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಕೇರಳದಿಂದ ಬರುವವರಿಗೆ ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದೆ. ಆದರೂ ಈಗಾಗಲೇ ವ್ಯಾಕ್ಸಿನೇಷನ್ ಪಡೆದವರಿಗೆ ಸೋಂಕು ಮತ್ತೆ ಹರಡುತ್ತಿದೆ. ಅಷ್ಟೇ ಅಲ್ಲದೇ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ ಶೇಕಡಾ 0.5 ಒಳಗೆ ಇತ್ತು. ಆದರೆ ಇಂದು ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಪಾಸಿಟಿವ್ ದರ ಶೇಕಡಾ 2.84 ಏರಿಕೆಯಾಗಿದೆ.  ಇದನ್ನೂ ಓದಿ: ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

blank

ಒಟ್ಟಾರೆ ಮುಂದಿನ ದಿನಗಳಲ್ಲಿ ತಮಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಓಡಾಡಿಕೊಂಡಿದ್ದ ಜನರಿಗೆ ಇದೀಗಾ ಮತ್ತೆ ಕೊರೊನಾ ಸ್ಫೋಟಗೊಂಡಿರುವುದು ಕಂಡು ಆತಂಕಕ್ಕೆ ಒಳಗಾಗುತ್ತಿದ್ದಾರೆ.

Source: publictv.in Source link