ನಂಜನಗೂಡು ದೇವಸ್ಥಾನ ನೆಲಸಮ: ಕೆರಳಿ ಕೆಂಡವಾದ ಸಿದ್ದರಾಮಯ್ಯ ಹೇಳಿದ್ದೇನು..?

ನಂಜನಗೂಡು ದೇವಸ್ಥಾನ ನೆಲಸಮ: ಕೆರಳಿ ಕೆಂಡವಾದ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿಂದೂ ದೇವಾಲಯಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಸಿದ್ದರಾಮಯ್ಯ ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದಿದ್ದಾರೆ.

ಪುರಾತನ ಹಿಂದೂ ದೇವಾಲಯ ಕೆಡವಿದ್ದು ಖಂಡನೀಯ.. ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆಯಾಗಿದೆ. ದೇವಸ್ಥಾನವನ್ನು ಪುನಃ ಸ್ಥಾಪಿಸಲು ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Source: newsfirstlive.com Source link