ಹೋರಿ ಬರ್ತ್​ಡೇ ಆಚರಿಸಿ.. ಕೇಕ್​ ಕಟ್​ ಮಾಡಿ.. ಕೋವಿಡ್​ ನಿಯಮ ಉಲ್ಲಂಘಿಸಿದ ರೇಣುಕಾಚಾರ್ಯ

ಹೋರಿ ಬರ್ತ್​ಡೇ ಆಚರಿಸಿ.. ಕೇಕ್​ ಕಟ್​ ಮಾಡಿ.. ಕೋವಿಡ್​ ನಿಯಮ ಉಲ್ಲಂಘಿಸಿದ ರೇಣುಕಾಚಾರ್ಯ

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಂದ ಕೋವಿಡ್ ನಿಯಮ ಉಲ್ಲಂಘನೆಯಾಗಿರುವ ಆರೋಪ ಕೇಳಿ ಬಂದಿದೆ. ಕೊರೊನಾ ನಿಯಮ ಉಲ್ಲಂಘಿಸಿದ ಶಾಸಕ ನೂರಾರು ಜನರ ಗುಂಪಲ್ಲಿ ಹೋರಿಯ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ ಎನ್ನಲಾಗಿದೆ.

blank

ಜಿಲ್ಲೆಯ ಹೊನ್ನಾಳಿ ತಾಲೂಕಿನ ಜೀನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಶಾಸಕ ರೇಣುಕಾಚಾರ್ಯ ನೇತೃತ್ವದಲ್ಲಿ ನೂರಾರು ಜನರು ಸೇರಿ ‘ಸಾಹುಕಾರ್’ ಎಂಬ ಹೋರಿಯ ಜನ್ಮ ದಿನದ ಪ್ರಯುಕ್ತ ಕೇಕ್​ ಕಟ್​ ಮಾಡಿ ಸಂಭ್ರಮಿಸಿದ್ದಾರೆ. ಈ ವೇಳೆ ಶಾಸಕ ಮಾಸ್ಕ್, ಸಾಮಾಜಿಕ ಅಂತರ ಇಲ್ಲದೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಶಾಸಕರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಕೈ-ಜೆಡಿಎಸ್ ಮೈತ್ರಿ: “ಬಕ್ರೀದ್ ಮೇ ಬಚೇಂಗೆ ತೋ, ಮೊಹರಂ ಮೇ ನಾಚೇಂಗೆ” ಎಂದಿದ್ದೇಕೆ ಖರ್ಗೆ..?

ಇದನ್ನೂ ಓದಿ:ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ

Source: newsfirstlive.com Source link