ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವವೂ ಇರಲಿದೆ ಎಂದ ಆರಗ ಜ್ಞಾನೇಂದ್ರ

ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವವೂ ಇರಲಿದೆ ಎಂದ ಆರಗ ಜ್ಞಾನೇಂದ್ರ

ಶಿವಮೊಗ್ಗ: ಮುಂದಿನ ಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅಮಿತ್ ಶಾ ಹೇಳಿಕೆ ನೀಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಆರಗ ಜ್ಞಾನೇಂದ್ರ.. ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ.. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಜೊತೆಗೆ ಚುನಾವಣೆ ನಡೆಯಲಿದೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವವೂ ಇರಲಿದೆ, ಬೊಮ್ಮಾಯಿ ಮುಂದಾಳತ್ವವೂ ಇರಲಿದೆ. ನಾಳೆಯಿಂದ ಅಧಿವೇಶನ ಆರಂಭವಾಗಲಿದೆ. ಇಷ್ಟು ದಿನ ಪ್ರಶ್ನೆ ಕೇಳುವ ಸ್ಥಾನದಲ್ಲಿದ್ದೆ.. ಇದೀಗ ಉತ್ತರ ನೀಡುವ ಸ್ಥಾನದಲ್ಲಿದ್ದೇನೆ.. ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ತಯಾರಾಗಿದ್ದೇನೆ ಎಂದಿದ್ದಾರೆ.

ಮೈಸೂರು ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ.. ಸಂತ್ರಸ್ತೆಯ ಪೋಷಕರ ಮನವೊಲಿಸುವ ಪ್ರಯತ್ನ ನಡಿದಿದೆ.. ಅಗತ್ಯ ಬಿದ್ದಲ್ಲಿ ಪ್ರಕರಣದ ಶೀಘ್ರ ವಿಚಾರಣೆಗಾಗಿ ವಿಶೇಷ ಪ್ರಾಸಿಕ್ಯೂಟರ್ ನೇಮಿಸಲಾಗತ್ತೆ.. ಈಗಿರುವ ಕಾಯ್ದೆಯಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅವಕಾಶವಿದೆ ಎಂದಿದ್ದಾರೆ.

Source: newsfirstlive.com Source link