ಹುಟ್ಟೂರಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದ ರಕ್ಷಿತ್ ಶೆಟ್ಟಿ

ಹುಟ್ಟೂರಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದ ರಕ್ಷಿತ್ ಶೆಟ್ಟಿ

ಉಡುಪಿ: ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ ತಮ್ಮ ಹುಟ್ಟೂರು ಉಡುಪಿಯ ಅಲೆವೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಗುಡ್ಡೆಯಂಗಡಿ ಜಂಕ್ಷನ್ ನಲ್ಲಿ ಕಳೆದ 37 ವರ್ಷಗಳಿಂದ ಗಣಪತಿ ವಿಗ್ರಹ ಇಟ್ಟು ಪೂಜಿಸಲಾಗುತ್ತದೆ. ರಕ್ಷಿತ್ ಶೆಟ್ಟಿ ತಂದೆ ತಾಯಿ ಅಣ್ಣ ಅತ್ತಿಗೆ ಮತ್ತು ಮಕ್ಕಳ ಜೊತೆ ಆಗಮಿಸಿ ದೇವರ ದರ್ಶನ ಮಾಡಿ, ಕುಟುಂಬದ ವತಿಯಿಂದ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

blank

ರಕ್ಷಿತ್ ಶೆಟ್ಟಿ ವೈಯಕ್ತಿಕ ಮತ್ತು ವೃತ್ತಿ ಜೀವನ ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿ, ರಕ್ಷಿತ್ ಕುಟುಂಬ ಅಲೆವೂರು ಕಟ್ಟೆ ಗಣಪತಿಯ ಪ್ರಸಾದ ಸ್ವೀಕರಿಸಿದರು. ಲೆಟ್ಸ್ ಕಿಲ್ ಗಾಂಧಿ ಎಂಬ ಕಿರುಚಿತ್ರದ ಮೂಲಕ ರಕ್ಷಿತ್ ಬಣ್ಣದ ಬದುಕನ್ನು ಆರಂಭ ಮಾಡಿದ್ದರು. ಆ ಸಂದರ್ಭ ಅಲೆವೂರು ಕಟ್ಟೆ ಗಣಪತಿ ಗುಡಿಯಲ್ಲೇ ಮೊದಲ ಪೂಜೆ ಸಲ್ಲಿಕೆ ಮಾಡಿದ್ದನ್ನು ಈ ಸಂದರ್ಭದಲ್ಲಿ ರಕ್ಷಿತ್ ಹಿರಿಯ ಸೋದರ ರಾಜೇಶ್ ಶೆಟ್ಟಿ ಅಲೆವೂರು ನೆನಪು ಮಾಡಿಕೊಂಡಿದ್ದಾರೆ.

blank

Source: newsfirstlive.com Source link