ನೈಟ್ ಕರ್ಫ್ಯೂ ಹೊತ್ತಲ್ಲಿ ಯುವಜನತೆಯ ಮೋಜು ಮಸ್ತಿ – ಪೊಲೀಸರ ಮುಂದೆಯೇ ಬಿಂದಾಸ್ ಸುತ್ತಾಟ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಮೂರನೇ ಅಲೆ ಭೀತಿ ಶುರುವಾಗಿದೆ. ಕೊರೊನಾ ಸಾಂಕ್ರಮಿಕ ರೋಗ ತಡೆಗಟ್ಟಲು ಸರ್ಕಾರ ಹಲವರು ನಿಯಮಗಳನ್ನು ವಿಧಿಸಿದೆ. ಹೀಗಿದ್ದರೂ ಬೆಂಗಳೂರಿನಲ್ಲಿ ಯುವಕ ಯುವತಿಯರು ನೈಟ್ ಕರ್ಫ್ಯೂ ವೇಳೆ ಮೋಜು-ಮಸ್ತಿ ಮಾಡುತ್ತಿದ್ದಾರೆ.

ನಗರದ ಸದಾಶಿವನಗರದಲ್ಲಿ ಯುವಕ, ಯುವತಿಯರು ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಭರ್ಜರಿ ಮ್ಯೂಸಿಕ್ ಹಾಕಿಕೊಂಡು ಸುತ್ತಾಡಿದ್ದಾರೆ. ಅಲ್ಲದೇ ಕಾರಿನ ರೂಫ್ ಡೋರ್ ಓಪನ್ ಮಾಡಿಕೊಂಡು ಮೂವಿಂಗ್ ಕಾರಿನಲ್ಲಿ ಡ್ಯಾನ್ಸ್ ಮಾಡುತ್ತಾ, ಜೋರಾಗಿ ಕೂಗಾಡುತ್ತಾ ಪೊಲೀಸರ ಮುಂದೆಯೇ ಸಾಗಿದ್ದಾರೆ. ಇದನ್ನೂ ಓದಿ: ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್

ಒಟ್ಟಾರೆ ಕೊರೊನಾ ನಿಯಮವನ್ನು ಉಲ್ಲಂಘಿಸಿ ಹೇಳೋರಿಲ್ಲ, ಕೇಳೋರಿಲ್ಲ ಎಂಬಂತೆ ಕಾರಿನಲ್ಲಿ ಯುವಕ, ಯುವತಿಯರು ವೀಕೆಂಡ್‍ನಲ್ಲಿ ಲೇಟ್ ನೈಟ್ ಜಾಲಿ ರೈಡ್ ಹೋಗಿದ್ದಾರೆ. ಇದೀಗ ಈ ವೀಡಿಯೋ ಸಿಕ್ಕಾಪಟ್ಟೆ ಚರ್ಚೆಗೆ ಕಾರಣವಾಗುತ್ತಿದೆ. ಇದನ್ನೂ ಓದಿ: ವಿಜಯಪುರದ ಕುವರಿಗೆ ರಾಷ್ಟ್ರೀಯ ಪ್ರಶಸ್ತಿ

Source: publictv.in Source link