ಕಲಬುರಗಿ ಪಾಲಿಕೆಯಲ್ಲಿ ಗದ್ದುಗೆ ಗದ್ದಲ ಮುಂದುವರಿಕೆ – ಜೆಡಿಎಸ್ ಒಲವು ಯಾರ ಕಡೆಗೆ?

ಕಲಬುರಗಿ:  ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿ ನಡೆಸುತ್ತಿದೆ. ಇನ್ನೂ ಈ ಬಗ್ಗೆ ಸೋಮವಾರ ಜೆಡಿಎಸ್ ಪಕ್ಷ ತನ್ನ ಅಂತಿಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಕಲಬುರಗಿ, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಾಧ್ಯತೆ: ಸಚಿವ ಅಶೋಕ್

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕೇಸರಿ ಧ್ವಜ ಹಾರಿಸಬೇಕೆಂದು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈಗಾಗಲೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೊತೆ ಸಿಎಂ ಬೊಮ್ಮಾಯಿ ಹಾಗೂ ಆರ್. ಅಶೋಕ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಪಾಲಿಕೆ ಅಖಾಡಕ್ಕೆ ಇಳಿದಿದ್ದ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಜೆಡಿಎಸ್ ವರಿಷ್ಠ ಎಚ್.ಡಿ ದೇವೆಗೌಡರೊಂದಿಗೆ ಕರೆ ಮಾಡಿ ಪಾಲಿಕೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.

ಈ ಕುರಿತಂತೆ ಸೋಮವಾರ ಹೆಚ್.ಡಿ ಕುಮಾರಸ್ವಾಮಿ, ದೇವೇಗೌಡರು, ಪಕ್ಷದ ಶಾಸಕರೊಂದಿಗೆ ಚರ್ಚಿಸಿ ತಮ್ಮ ತೀರ್ಮಾನವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಸದ್ಯ ಜೆಡಿಎಸ್ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬುವುದೇ ಇದೀಗ ಯಕ್ಷ ಪ್ರಶ್ನೆಯಾಗಿದೆ. ಇದನ್ನೂ ಓದಿ: ಲ್ಯಾಬ್ ಉಪಕರಣ ಖರೀದಿಯಲ್ಲಿ 34 ಕೋಟಿ ರೂ. ಕಿಕ್ ಬ್ಯಾಕ್- ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ

Source: publictv.in Source link