ಚಿಕ್ಕಬಳ್ಳಾಪುರ ಭೀಕರ ಅಪಘಾತ; ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ

ಚಿಕ್ಕಬಳ್ಳಾಪುರ ಭೀಕರ ಅಪಘಾತ; ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕು ಮರಿನಾಯಕನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಓವರ್​ಟೇಕ್​ ಮಾಡಲು ಹೋಗಿ ಜೀಪ್​ಗೆ ಗುದ್ದಿದ ಲಾರಿ- ಭೀಕರ ಅಪಘಾತದಲ್ಲಿ 8 ಜನರ ದುರ್ಮರಣ

ಇನ್ನು ಚಿಂತಾಮಣಿ ಬಳಿ ನಡೆದ ಅಘಪಾತದಲ್ಲಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಲು ಕಾಂಗ್ರೆಸ್ ಶಾಸಕರು ನೆರವು ನೀಡಿದ್ದಾರೆ. ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶ್ ಕುಮಾರ್, ಮಾಲೂರು ಶಾಸಕ ಕೆ.ವೈ.ನಂಜೇಗೌಡರಿಂದ ಗಾಯಾಳುಗಳಿಗೆ ನೆರವಾಗಿದ್ದಾರೆ.
ಶ್ರೀನಿವಾಸಪುರದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಪ್ಯಾಸೆಂಜರ್ ಜೀಪ್​ಗೆ ಸಿಮೆಂಟ್ ಲಾರಿ ಡಿಕ್ಕಿಯೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಂತಾಮಣಿ‌ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Source: newsfirstlive.com Source link