ರಾಜ್ಯ ರೈತ ಸಂಘದಿಂದ ನಾಳೆ ವಿಧಾನಸೌಧಕ್ಕೆ ಮುತ್ತಿಗೆ

ರಾಜ್ಯ ರೈತ ಸಂಘದಿಂದ ನಾಳೆ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ನಾಳೆಯಿಂದ ಮಳೆಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಅಧಿವೇಶನದ ಆರಂಭದಲ್ಲೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ರಾಜ್ಯ ರೈತ ಸಂಘ ನಿರ್ಧರಿಸಿದೆ.

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕೋದಾಗಿ ರಾಜ್ಯ ರೈತ ಸಂಘ ಹೇಳಿದೆ. ಕೃಷಿ ಕಾಯ್ದೆ ಅನುಷ್ಠಾನ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ. ಮತ್ತು ಕೃಷಿ ಕಾಯ್ದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘ ಸಜ್ಜಾಗಿದ್ದು, ನಾಳೆ ಬೆಳಗ್ಗೆ 11.30ಕ್ಕೆ ಪ್ರತಿಭಟನೆ ಆರಂಭ ಮಾಡುವುದಾಗಿ ಹೇಳಿದೆ.

Source: newsfirstlive.com Source link